Urdu   /   English   /   Nawayathi

ಕೊರೊನಾ ಭೀತಿ: ಮಂಗಳೂರಲ್ಲಿ 14 ಮಂದಿಯ ಗಂಟಲು ದ್ರವ ಪರೀಕ್ಷೆಗೆ ರವಾನೆ

share with us

ಮಂಗಳೂರು: 17 ಮಾರ್ಚ್ 2020 (ಫಿಕ್ರೋಖಬರ್ ಸುದ್ದಿ) ದ.ಕ ಜಿಲ್ಲೆಯಲ್ಲಿ ಕೊರೊನಾ ಭೀತಿ ಹೆಚ್ಚಾಗುತ್ತಿದ್ದು, ಇಂದು ವಿದೇಶದಿಂದ ಬಂದ 456 ಮಂದಿಯನ್ನು ತಪಾಸಣೆ ನಡೆಸಿ 14 ಮಂದಿಯ ಗಂಟಲು ದ್ರವ ಪರೀಕ್ಷೆಗೆ ಕಳುಹಿಸಲಾಗಿದೆ. ಈ ಹಿಂದೆ ಕಳುಹಿಸಲಾದ 10 ಮಂದಿಯ ಗಂಟಲು ದ್ರವ ಪರೀಕ್ಷೆಯ ವರದಿ ಬಂದಿದ್ದು, ಕೊರೊನಾ ಸೋಂಕು ಇಲ್ಲ ಎಂದು ದೃಢಪಟ್ಟಿದೆ. 7 ಮಂದಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ವಿದೇಶದಿಂದ ಬಂದಿರುವ 241 ಮಂದಿ ಮನೆಯಲ್ಲಿ ವೈದ್ಯಕೀಯ ನಿಗಾದಲ್ಲಿ ಇದ್ದಾರೆ. ಇಂದಿಗೆ 8 ಮಂದಿ ವೈದ್ಯಕೀಯ ನಿಗಾದ ಅವಧಿ ಪೂರ್ಣಗೊಳಿಸಿದ್ದು, ಅವರಲ್ಲಿ ಸೋಂಕು ಪತ್ತೆಯಾಗಿಲ್ಲ.

corona virus infarction 14 people throat liquid sent to test in mangalore

ದ.ಕ ಜಿಲ್ಲಾಡಳಿತದಿಂದ ಕೊರೊನಾ ವೈರಸ್ ಸೋಂಕು ಪ್ರಕಟಣೆ

ಮಾರ್ಚ್ 14ರಂದು ದುಬೈನಿಂದ ಬಂದಿದ್ದ ವಿಮಾನದಲ್ಲಿ ಕಾಸರಗೋಡು ವ್ಯಕ್ತಿಗೆ ಕೊರೊನಾ ಸೋಂಕು ದೃಢಪಟ್ಟಿರುವ ಹಿನ್ನೆಲೆ ಆ ವ್ಯಕ್ತಿ ಪ್ರಯಾಣಿಸಿದ ವಿಮಾನದಲ್ಲಿದ್ದ ಪ್ರಯಾಣಿಕರನ್ನು ಮನೆಯಲ್ಲಿ ವೈದ್ಯಕೀಯ ನಿಗಾದಲ್ಲಿಡಲಾಗಿದೆ ಎಂದು ಜಿಲ್ಲಾಡಳಿತದ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಈ, ಇ ವರದಿ

Prayer Timings

Fajr فجر
Dhuhr الظهر
Asr أسر
Maghrib مغرب
Isha عشا