Urdu   /   English   /   Nawayathi

Latest News:

Latest News:

ಪೌರತ್ವ ವಿರೋಧಿ ಹೋರಾಟದ ಕೇಂದ್ರ ಬಿಂದು ಶಾಹೀನ್‌ ಬಾಗ್‌ ತೆರವು

share with us

ನವದೆಹಲಿ: 24 ಮಾರ್ಚ್ 2020 (ಫಿಕ್ರೋಖಬರ್ ಸುದ್ದಿ) ಕೊವಿಡ್-19 ವೈರಸ್ ಹರಡುವಿಕೆಯನ್ನು ಪರಿಣಾಮಕಾರಿಯಾಗಿ ತಡೆಗಟ್ಟುವ ನಿಟ್ಟಿನಲ್ಲಿ ದೇಶಾದ್ಯಂತ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ರಾಷ್ಟ್ರ ರಾಜಧಾನಿಯಲ್ಲಿ ಸಂಪೂರ್ಣ ಲಾಕ್​​​ಡೌನ್ ಆದೇಶವಿದ್ದು, ಈ ನಡುವೆ ಶಾಹೀನ್ ಬಾಗ್ ಪ್ರದೇಶದಲ್ಲಿ ನಡೆಯುತ್ತಿದ್ದ ಸಿಎಎ ವಿರೋಧಿ ಪ್ರತಿಭಟನಾ ಸ್ಥಳವನ್ನು ಪೊಲೀಸರು ಜೆಸಿಬಿ ಯಂತ್ರದ ಮೂಲಕ ತೆರವುಗೊಳಿಸಿದ್ದಾರೆ. ಈ ಮೊದಲು ಶಾಹೀನ್ ಬಾಗ್‌ನ ಪ್ರತಿಭಟನಾ ಸ್ಥಳದಲ್ಲಿ ಲಾಕ್‌ಡೌನ್ ವಿಧಿಸಿದ್ದರಿಂದ, ಸ್ಥಳವನ್ನು ತೆರವುಗೊಳಿಸುವಂತೆ ಪ್ರತಿಭಟನಾಕಾರರಲ್ಲಿ ಕೋರಲಾಗಿತ್ತು. ಆದರೆ ಪ್ರತಿಭಟನಾಕಾರರು ನಿರಾಕರಿಸಿದ ಕಾರಣ, ಪ್ರತಿಭಟನಾ ಸ್ಥಳವನ್ನು ತೆರವುಗೊಳಿಸಲಾಗಿದೆ. ಈ ವೇಳೆ ಸ್ಥಳ ಬಿಟ್ಟು ಕದಲಲು ಒಪ್ಪದ ಕೆಲವು ಪ್ರತಿಭಟನಾಕಾರರನ್ನು ವಶಕ್ಕೆ ಪಡೆಯಲಾಗಿದೆ. ದೆಹಲಿಯಲ್ಲಿ ಸಂಪೂರ್ಣ ನಿರ್ಬಂಧ ನಡುವೆ, ಜಾಫ್ರಾಬಾದ್‌ನಲ್ಲಿಯೂ ಭಾರಿ ಭದ್ರತಾ ನಿಯೋಜನೆ ಮಾಡಲಾಗಿದೆ.

ಈ, ಭಾ ವರದಿ

Prayer Timings

Fajr فجر
Dhuhr الظهر
Asr أسر
Maghrib مغرب
Isha عشا