Urdu   /   English   /   Nawayathi

ಕೋವಿಡ್- 19: ಕಳೆದ 24 ಗಂಟೆಗಳ ಅವಧಿಯಲ್ಲಿ ಆರು ಸಾವು, 106 ಹೊಸ ಪ್ರಕರಣಗಳು- ಕೇಂದ್ರ ಆರೋಗ್ಯ ಸಚಿವಾಲಯ

share with us

ನವದೆಹಲಿ: 29 ಮಾರ್ಚ್ 2020 (ಫಿಕ್ರೋಖಬರ್ ಸುದ್ದಿ) ಕೋವಿಡ್ -19 ಸೋಂಕಿನಿಂದ  ಕಳೆದ 24 ಗಂಟೆಗಳ ಅವಧಿಯಲ್ಲಿ ಆರು ರಾಜ್ಯಗಳಲ್ಲಿ ಆರು ಸಾವಿನ ಪ್ರಕರಣಗಳು ವರದಿಯಾಗಿದ್ದು,106 ಹೊಸ ಪ್ರಕರಣಗಳು ದೃಢಪಟ್ಟಿರುವುದಾಗಿ ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ. ಈವರೆಗೂ 25 ಸಾವಿನ ಪ್ರಕರಣಗಳು ಸೇರಿದಂತೆ ದೇಶದಲ್ಲಿ 1070 ಹೊಸ ಪ್ರಕರಣಗಳು ದೃಢಪಟ್ಟಿರುವುದಾಗಿ ಕೇಂದ್ರ ಆರೋಗ್ಯ ಸಚಿವಾಲಯದ ಜಂಟಿ ಕಾರ್ಯದರ್ಶಿ ಲಾವ್ ಅಗರ್ ವಾಲ್ ತಿಳಿಸಿದ್ದಾರೆ. ಕೋವಿಡ್ ಸಾಂಕ್ರಾಮಿಕ ರೋಗದ ಹಿನ್ನೆಲೆಯಲ್ಲಿ ಭಾನುವಾರದವರೆಗೂ 34 ಸಾವಿರದ 931 ಪರೀಕ್ಷೆಗಳನ್ನು ನಡೆಸಲಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿಯ ರಾಮನ್ ರಾಮನ್ ಗಂಗಖೇಡ್ಕರ್ ಹೇಳಿದ್ದಾರೆ. ಪ್ರಯೋಗಾಲಯಗಳ ಸಂಖ್ಯೆಯನ್ನು ಹೆಚ್ಚಿಸಲಾಗಿದೆ. 113 ಪ್ರಯೋಗಾಲಯಗಳು ಕಾರ್ಯನಿರ್ವಹಿಸುತ್ತಿವೆ. ಕೋವಿಡ್-19 ಪರೀಕ್ಷೆ ನಡೆಸಲು 47 ಖಾಸಗಿ ಪ್ರಯೋಗಾಲಯಗಳಿಗೂ ಅನುಮತಿ ನೀಡಲಾಗಿದೆ ಎಂದು ಅವರು ತಿಳಿಸಿದ್ದಾರೆ. ಲಾಕ್ ಡಾನ್ ವೇಳೆಯಲ್ಲಿ ಪ್ರಯೋಗಾಲಯಗಳಲ್ಲಿ ಕೆಲಸ ಮಾಡುವವರಿಗೆ ಉದ್ಯೋಗದಾತರು ಯಾವುದೇ ರೀತಿಯ  ಕಡಿತ ಮಾಡದೆ ಪೂರ್ಣ ಪ್ರಮಾಣದ ಸಂಬಳ ನೀಡಬೇಕು, ಈ ಅವಧಿಯಲ್ಲಿ ಮನೆ ಮಾಲೀಕರು ಬಾಡಿಗೆ ಪಡೆಯುವಂತಿಲ್ಲ ಎಂದು ಕೇಂದ್ರ ಗೃಹ ಸಚಿವಾಲಯ ಜಂಟಿ ಕಾರ್ಯದರ್ಶಿ ಪುಣ್ಯ ಸಲೀಲಾ ಶ್ರೀವಾಸ್ತವ ಸೂಚನೆ ನೀಡಿದ್ದಾರೆ. 21 ದಿನಗಳ ಲಾಕ್ ಡೌನ್ ಸಂದರ್ಭದಲ್ಲಿ ಉಂಟಾಗುವ ಮಾನಸಿಕ ಆರೋಗ್ಯ ಸಮಸ್ಯೆಗಳಿಗೆ ಸಂಬಂಧಿಸಿದಂತೆ ಸಲಹೆ ನೀಡಲು 08046110007 ಸಹಾಯವಾಣಿಯನ್ನು ನಿಮ್ಹಾನ್ಸ್ ತೆರೆದಿದೆ ಎಂದು ಅಗರ್ ವಾಲ್ ತಿಳಿಸಿದ್ದಾರೆ.

ಕ, ಪ್ರ ವರದಿ

Prayer Timings

Fajr فجر
Dhuhr الظهر
Asr أسر
Maghrib مغرب
Isha عشا