Urdu   /   English   /   Nawayathi

ಭಟ್ಕಳ ಮೂಲದ 22 ವರ್ಷದ ಯುವಕ ಕರೋನಾ ವೈರಸನಿಂದ ಗುಣಮುಖ : ನಾಳೆ ವೆನ್ಲಾಕ್ ಆಸ್ಪತ್ರೆಯಿಂದ ಡಿಸ್ಚಾರ್ಜ್

share with us

ಭಟ್ಕಳ: 05 ಏಪ್ರಿಲ್ 2020 (ಫಿಕ್ರೋಖಬರ್ ಸುದ್ದಿ) ವೆನ್ಲಾಕ್ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಭಟ್ಕಳದ ಮೂಲದ ಕರೋನಾ ಸೋಂಕಿತ ಗುಣ ಮುಖವಾಗಿದ್ದು ಸೋಮವಾರ ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡುವುದಾಗಿ ಮಂಗಳೂರು ಜಿಲ್ಲಾಧಿಕಾರಿ ತಿಳಿಸಿದ್ದಾರೆ. ಭಟ್ಕಳ ಮೂಲದ 22 ವರ್ಷದ ಯುವಕನಾಗಿದ್ದ ಈತ ಮಾರ್ಚ್ ೧೯ ರ ವಿಮಾನದಲ್ಲಿ ದುಬೈನಿಂದ ಮಂಗಳೂರು ವಿಮಾನ ನಿಲ್ದಾಣಕ್ಕೆ ಬಂದಿದ್ದು .ಆತನಿಗೆ ಜ್ವರದ ಲಕ್ಷಣ ಕಂಡುಬಂದಿದ್ದರಿಂದ ವಿಮಾನ ನಿಲ್ದಾಣದಿಂದ ಈತನನ್ನು ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಿದ್ದು ಮಾರ್ಚ್ 22 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮೊದಲ ಕೊರೊನಾ ಪಾಸಿಟಿವ್ ಈ ಯುವಕನಲ್ಲಿ ಪತ್ತೆ ಯಾಗಿತ್ತು .ನಂತರ ಯುವಕನಿಗೆ ವೆನ್ಲಾಕ್ ಆಸ್ಪತ್ರೆ ಐಸೋಲೇಷನ್ ಚಿಕಿತ್ಸೆ ಮುಂದುವರೆಸಿದ್ದು .ಏಪ್ರಿಲ್ 2 ಮತ್ತು 3 ರಂದು ಪುನಃ ಈತನ ಗಂಟಲವು ದ್ರವ್ಯ ಮಾದರಿಯನ್ನು ಸಂಗ್ರಹಿಸಿ ಪರೀಕ್ಷೆಗೆ ಕಳುಹಿಸಿದಾಗ ವರದಿ ನೆಗೆಟಿವ್ ಬಂದಿರುವ ಕಾರಣ ಭಟ್ಕಳ ಮುಲದ ವ್ಯಕ್ತಿಯನ್ನು ನಾಳೆ ಡಿಸ್ಚಾರ್ಜ್ ಮಾಡುವುದಾಗಿ ತಿಳಿಸಿದ್ದಾರೆ.

ಸ, ವರದಿ

Prayer Timings

Fajr فجر
Dhuhr الظهر
Asr أسر
Maghrib مغرب
Isha عشا