Urdu   /   English   /   Nawayathi

ಬಂಟ್ವಾಳದಲ್ಲಿ ಅಕ್ರಮ ಮರಳುಗಾರಿಕೆ: ಓರ್ವನ ಬಂಧಿನ, ನಾಲ್ವರ ವಿರುದ್ಧ ಪ್ರಕರಣ ದಾಖಲು

share with us

ಬಂಟ್ವಾಳ(ದ.ಕ): 16 ಏಪ್ರಿಲ್ 2020 (ಫಿಕ್ರೋಖಬರ್ ಸುದ್ದಿ) ಧ್ವನಿವರ್ಧಕದ ಮೂಲಕ ಒಂದು ಕಡೆ ಮನೆಯಲ್ಲೇ ಇರಿ ಎಂಬ ಘೋಷಣೆಯನ್ನು ಕೂಗುತ್ತಾ ಪೊಲೀಸರು ಸಾಗಿದರೆ, ಇನ್ನೊಂದೆಡೆ ರಾಜಾರೋಷವಾಗಿ ಅಕ್ರಮ ಮರಳುಗಾರಿಕೆ ನಡೆಸುತ್ತಿರುವ ಪ್ರಕರಣವನ್ನು ಬಂಟ್ವಾಳ ಪೊಲೀಸರು ಪತ್ತೆ ಹಚ್ಚಿದ್ದಾರೆ. ಈ ಸಂಬಂಧ ಓರ್ವನನ್ನು ಬಂಧಿಸಿ ನಾಲ್ವರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಬಂಟ್ವಾಳ ತಾಲೂಕಿನ ಕರಿಯಂಗಳ ಎಂಬಲ್ಲಿ ಫಲ್ಗುಣಿ ನದಿಯಲ್ಲಿ ಅಕ್ರಮವಾಗಿ ಮರಳುಗಾರಿಗೆ ನಡೆಯುತ್ತಿರುವ ಕುರಿತು ಖಚಿತ ಮಾಹಿತಿ ಮೇರೆಗೆ ಪೊಲೀಸ್ ಪ್ರೊಬೇಷನರಿ ಐಪಿಎಸ್ ಅಧಿಕಾರಿ ರಂಜಿತ್ ಇಂದು ಮಧ್ಯಾಹ್ನ ದಾಳಿ ನಡೆಸಿದ್ದಾರೆ. ಈ ಸಂದರ್ಭ ಸ್ಥಳದಲ್ಲಿ 10 ಲೋಡ್ ಮರಳು, ಮರಳು ತುಂಬಿಸಲು ಉಪಯೋಗಿಸುತ್ತಿದ್ಧ 1 ಹಿಟಾಚಿ, 3 ಬೋಟ್​ಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ, ಇ ವರದಿ

Prayer Timings

Fajr فجر
Dhuhr الظهر
Asr أسر
Maghrib مغرب
Isha عشا