Urdu   /   English   /   Nawayathi

ಕೊರೊನಾ ಶಂಕೆ: ಇಂದು ಮಂಗಳೂರಿನಲ್ಲಿ 151 ಮಂದಿಯ ಗಂಟಲು ದ್ರವ ಪರೀಕ್ಷೆಗೆ ರವಾನೆ

share with us

ಮಂಗಳೂರು: 18 ಏಪ್ರಿಲ್ 2020 (ಫಿಕ್ರೋಖಬರ್ ಸುದ್ದಿ) ಕೊರೊನಾ ಶಂಕೆ ಹಿನ್ನೆಲೆಯಲ್ಲಿ ಮಂಗಳೂರಿನಲ್ಲಿ ಇಂದು 151 ಮಂದಿಯ ಗಂಟಲು ದ್ರವದ ಮಾದರಿಗಳನ್ನು ಪರೀಕ್ಷೆಗೆಂದು ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ. ಈ ಹಿಂದೆ ಕಳುಹಿಸಲಾದ 7 ಮಂದಿಯ ವರದಿ ನೆಗೆಟಿವ್ ಬಂದಿದೆ. ಈ ವರೆಗೆ 720 ಮಂದಿಯ ಗಂಟಲು ದ್ರವ ಮಾದರಿಗಳನ್ನು ಪರೀಕ್ಷೆಗೆ ಕಳುಹಿಸಲಾಗಿದ್ದು, ಇದರಲ್ಲಿ 13 ಪಾಸಿಟಿವ್ ಮತ್ತು 707 ನೆಗೆಟಿವ್ ಬಂದಿವೆ. ಇಂದು 46 ಮಂದಿಯನ್ನು ಸ್ಕ್ರೀನಿಂಗ್ ಮಾಡಲಾಗಿದ್ದು, ಈವರೆಗೆ ಒಟ್ಟು 39,126 ಮಂದಿಯನ್ನು ಸ್ಕ್ರೀನಿಂಗ್ ಮಾಡಿದಂತಾಗಿದೆ. ಹೋಮ್ ಕ್ವಾರಂಟೈನ್​ನಲ್ಲಿ 260 ಮಂದಿ ಇದ್ದು, 15 ಮಂದಿ ಇಎಸ್ಐ ಆಸ್ಪತ್ರೆಯಲ್ಲಿ ಕ್ವಾರಂಟೈನ್​ನಲ್ಲಿ ಇದ್ದಾರೆ. ಇಂದಿಗೆ 5,813 ಮಂದಿ 28 ದಿನದ ಹೋಮ್ ಕ್ವಾರಂಟೈನ್ ಪೂರೈಸಿದ್ದಾರೆ . ಕೊರೊನಾ ಪಾಸಿಟಿವ್ ಬಂದಿದ್ದ 12 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದು, ಇನ್ನೂ ಓರ್ವ ವ್ಯಕ್ತಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಈ, ಇ ವರದಿ

Prayer Timings

Fajr فجر
Dhuhr الظهر
Asr أسر
Maghrib مغرب
Isha عشا