Urdu   /   English   /   Nawayathi

ಲಾಕ್‍ಡೌನ್ ಸಡಿಲಿಕೆ ನಿರ್ಧಾರ ಕೈಬಿಡುವಂತೆ ಸಿಎಂಗೆ ಎಚ್.ಕೆ.ಪಾಟೀಲ್ ಸಲಹೆ

share with us

ಬೆಂಗಳೂರು: 25 ಏಪ್ರಿಲ್ 2020 (ಫಿಕ್ರೋಖಬರ್ ಸುದ್ದಿ) ಲಾಕ್‍ಡೌನ್ ಸಡಿಲಿಕೆ ನಿರ್ಧಾರವನ್ನು ಕೈ ಬಿಡಬೇಕು ಎಂದು ಮಾಜಿ ಸಚಿವ ಎಚ್.ಕೆ.ಪಾಟೀಲ್ ಅವರು ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಒತ್ತಾಯಿಸಿದ್ದಾರೆ.ಲಾಕ್‍ಡೌನ್ ಸಡಿಲಿಕೆಯಂತಹ ನಿರ್ಣಯ ಶ್ರೀಮಂತ ವರ್ಗದ ಪರವೇ ಹೊರತು ಆರ್ಥಿಕ ದುಸ್ಥಿತಿಯಿಂದ ಬಳಲುತ್ತಿರುವ ಬಡವನ ಪರವಾಗುವುದೇ ಇಲ್ಲ. ಇಂತಹ ನಿರ್ಣಯಗಳಿಂದ ಕರ್ನಾಟಕಕ್ಕೆ ತಾವು ದುರಂತಮಯ ಸನ್ನಿವೇಶ ತಂದೊಡ್ಡಿದ ಅಪಕೀರ್ತಿಗೆ ಪಾತ್ರರಾಗುತ್ತೀರಿ ಎಂದು ಅವರು ಹೇಳಿದ್ದಾರೆ. ಹಳಿ ತಪ್ಪಿರುವ ಅರ್ಥ ವ್ಯವಸ್ಥೆಯನ್ನು ಮರಳಿ ಅಭಿವೃದ್ಧಿ ಪಥದತ್ತ ಚಲಿಸುವಂತೆ ಮಾಡಲು ಕೇವಲ ಲಾಕ್‍ಡೌನ್ ಸಡಿಲಿಕೆ ಉಪಾಯವಾಗುವುದಿಲ್ಲ. ಅದಕ್ಕೆ ಸಮಗ್ರವಾದ ಆರ್ಥಿಕ ಚೈತನ್ಯ ತುಂಬುವ ಭ್ರಷ್ಟಾಚಾರ ಮುಕ್ತ, ಪ್ರಾಮಾಣಿಕ, ನೈತಿಕ ಮನಸ್ಥಿತಿಯ ಕಾರ್ಯಕ್ರಮಗಳ ಅವಶ್ಯಕತೆ ಇದೆ. ಜನತೆ ತಮ್ಮ ತಮ್ಮ ಉದ್ಯೋಗಗಳಲ್ಲಿ ಮರಳಿ ತೊಡಗಿ, ಎಂದಿನಂತೆ ತಮ್ಮ ಆದಾಯವನ್ನು ಕ್ರೋಢೀಕರಿಸಿಕೊಳ್ಳುವುದು ಕೇವಲ ಈ ಸಡಿಲಿಕೆಯಿಂದ ಸಾಧ್ಯವಾಗುವುದಿಲ್ಲ ಎಂದು ಎಚ್.ಕೆ.ಪಾಟೀಲ್ ತಮ್ಮ ವಿವರವಾದ ಪತ್ರದಲ್ಲಿ ಟೀಕಿಸಿದ್ದಾರೆ. ನೀವು ಆರ್ಥಿಕ ಚೈತನ್ಯ ತುಂಬಬೇಕಾಗಿರುವುದು ಗಣಿಧಣಿಗಳಿಗಲ್ಲ, ರಿಯಲ್ ಎಸ್ಟೇಟ್ ಮಧ್ಯವರ್ತಿ ವ್ಯಾಪಾರಿಗಳಿಗಲ್ಲ, ರಾಜಕಾರಣಿಗಳು ಹೊಂದಿರುವ ಕಟ್ಟಡ ಸಂಕೀರ್ಣಗಳ ಬಾಡಿಗೆ ಬರಬೇಕೆಂಬ ಉದ್ದೇಶದಿಂದ ಐಟಿ-ಬಿಟಿ ಕಂಪನಿಗಳಿಗೆ ಲಾಕ್‍ಡೌನ್ ಸಡಿಲಗೊಳಿಸುವ ನಿರ್ಧಾರ ಮೇಲ್ಮಧ್ಯಮ ವರ್ಗದವರಿಗೆ ಮತ್ತು ಸಿರಿವಂತರಿಗೆ ಮಾತ್ರ ಸಹಾಯವಾದೀತು. ಲಾಕ್‍ಡೌನ್ ಸಡಿಲಗೊಳಿಸಿ ಬೆಂಗಳೂರಿನಂಥ ರೆಡ್ ಅಲರ್ಟ್ ಪ್ರದೇಶದಲ್ಲಿಯೇ ಹತ್ತಾರು ಲಕ್ಷ ವಾಹನಗಳ ಸಂಚಾರಕ್ಕೆ ಅನುಮತಿ ನೀಡಲಾಗಿದೆ. ಬೆಂಗಳೂರಿನಲ್ಲಿ ಒಂದು ಗಂಟೆಗೆ 60-70 ಸಾವಿರ ವಾಹನಗಳು ಚಲಿಸುತ್ತಿವೆ ಎಂದು ನನಗೆ ಖಚಿತವಾದ ಮಾಹಿತಿ ಇದೆ.

ಐದು ಲಕ್ಷ ಬೈಕ್‍ಗಳು ರೋಡಿಗಿಳಿದಿವೆ ಎಂಬ ಮಾಹಿತಿ ಇದೆ. ನಮ್ಮ ಬೆಂಗಳೂರು ಪೆÇಲೀಸರೇ ಎರಡು ದಿನಗಳಿಂದ ಸಮೀಕ್ಷೆ ನಡೆಸಿ, ವರದಿ ಸಲ್ಲಿಸಿದ್ದಾರೆಂದು ತಿಳಿದಿದೆ. ರಾಜ್ಯದಲ್ಲಿ ಇಲ್ಲಿಯವರೆಗೆ ಏ.22ರವರೆಗೆ 29,512 ಜನರನ್ನು ಪರೀಕ್ಷೆ ಮಾಡಲಾಗಿದೆ. 23 ಮತ್ತು 24ರಂದು ಕೈಗೊಂಡಿರುವ ಒಟ್ಟು ಪರೀಕ್ಷೆಗಳ ಸಂಖ್ಯೆ ಇನ್ನೂ ಲಭ್ಯವಾಗಿಲ್ಲ ಎಂದು ಹೇಳಲಾಗಿದೆ. ನಮ್ಮ ರಾಜ್ಯದಲ್ಲಿ ಪ್ರಕರಣಗಳ ಸಂಖ್ಯೆ ಕಡಿಮೆಯಾಗುತ್ತಿದೆ ಎಂದು ಸರ್ಕಾರ ಬೆನ್ನು ಚಪ್ಪರಿಸಿಕೊಳ್ಳುತ್ತಿದೆ. ಇದು ಸುಳ್ಳು ಸಮರ್ಥನೆಯಾಗುತ್ತಿದೆ ಎಂದು ಅವರು ಟೀಕಿಸಿದ್ದಾರೆ.ರಾಷ್ಟ್ರದಲ್ಲಿ ಸೋಂಕಿತ 25 ಸಾವಿರ ಜನರಲ್ಲಿ, ಈವರೆಗೆ 5 ಸಾವಿರ ಜನರು ಮಾತ್ರ ಗುಣಮುಖರಾಗಿದ್ದಾರೆ. ಒಂದು ಸಾವಿರ ಜನರು ಸಾವಿಗೀಡಾಗಿದ್ದಾರೆ. ರಾಷ್ಟ್ರ ಮತ್ತು ರಾಜ್ಯದಲ್ಲಿ ಪರಿಸ್ಥಿತಿ ಹೀಗಿರುವಾಗ ಲಾಕ್‍ಡೌನ್ ಸಡಿಲಗೊಳಿಸುವ ತಮ್ಮ ತೀರ್ಮಾನ ದುರಂತಕ್ಕೆ ಆಹ್ವಾನ ನೀಡಿದಂತಾಗಿದೆ. ಆದ್ದರಿಂದ ತಕ್ಷಣವೇ ಈ ತೀರ್ಮಾನ ವಾಪಸ್ ಪಡೆಯಬೇಕೆಂದು ಒತ್ತಾಯಿಸಿದ್ದಾರೆ.

ಈ, ಸಂ ವರದಿ

Prayer Timings

Fajr فجر
Dhuhr الظهر
Asr أسر
Maghrib مغرب
Isha عشا