Urdu   /   English   /   Nawayathi

ಶೀಘ್ರದಲ್ಲಿಯೇ ಆರ್ಥಿಕ ಚಟುವಟಿಕೆ ಪ್ರಾರಂಭ: ಕಾರ್ಮಿಕರು ಆತಂಕ ಪಡುವ ಅಗತ್ಯವಿಲ್ಲ- ಸಿಎಂ ಬಿಎಸ್‌ವೈ ಅಭಯ

share with us

ಬೆಂಗಳೂರು: 01 ಮೇ 2020 (ಫಿಕ್ರೋಖಬರ್ ಸುದ್ದಿ) ಕೋವಿಡ್ 19 ಸೋಂಕಿನಿಂದ ದೇಶಾದ್ಯಂತ ಆರ್ಥಿಕ ಚಟುವಟಿಕೆಗಳು ಬಹುತೇಕ ಸ್ತಬ್ಧವಾಗಿದ್ದು, ಇದರಿಂದ ದುಡಿದು ತಿನ್ನುವ ಕಾರ್ಮಿಕ ಬಂಧುಗಳು ಹೆಚ್ಚಿನ ತೊಂದರೆ ಅನುಭವಿಸಬೇಕಾಯಿತು. ಇಂತಹ ಕಠಿಣ ಸಂದರ್ಭದಲ್ಲಿ ಸರ್ಕಾರ ನಿಮ್ಮ ಬೆನ್ನಿಗೆ ನಿಂತಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ. ಈ ಬಗ್ಗೆ ಟ್ವಿಟ್ಟರ್‌ನಲ್ಲಿ ಹೇಳಿಕೆ ಪ್ರಕಟಿಸಿರುವ ಅವರು, ನಿಮ್ಮೆಲ್ಲರ ಸಹಕಾರದಿಂದ ಇತರ ದೇಶಗಳಿಗೆ ಹೋಲಿಸಿದರೆ ಭಾರತದಲ್ಲಿ ಕೋವಿಡ್ ಪರಿಸ್ಥಿತಿ ನಿಯಂತ್ರಣದಲ್ಲಿದೆ. ಶೀಘ್ರದಲ್ಲಿಯೇ ಆರ್ಥಿಕ ಚಟುವಟಿಕೆಗಳು ಮತ್ತೆ ಪ್ರಾರಂಭವಾಗುವ ನಿರೀಕ್ಷೆ ಇದೆ.  ಈ ನಿಟ್ಟಿನಲ್ಲಿ ಸರ್ಕಾರ ಈಗಾಗಲೇ ವಾಣಿಜ್ಯೋದ್ಯಮಿಗಳೊಂದಿಗೆ ಸಭೆ ನಡೆಸಿದ್ದು, ಕಾರ್ಮಿಕರ ಹಿತ ಕಾಯುವ ಹಾಗೂ ವೇತನ ಪಾವತಿ ಮಾಡುವಂತೆ ಮನವಿ ಮಾಡಿದೆ. ಆದ್ದರಿಂದ ವಲಸೆ ಕಾರ್ಮಿಕರು ಆತಂಕಕ್ಕೆ ಒಳಗಾಗದೆ ಕೇಂದ್ರ ಸರ್ಕಾರದ ಸೂಚನೆ ಬಂದೊಡನೆ ಕೈಗಾರಿಕೆ ಹಾಗೂ ವಾಣಿಜ್ಯ ಚಟುವಟಿಕೆ ಪುನರಾರಂಭ ಮಾಡಲು ಸಹಕರಿಸಬೇಕು ಎಂದು ಮನವಿ ಮಾಡಿದ್ದಾರೆ.

CM of Karnataka@CMofKarnataka

ಮುಖ್ಯಮಂತ್ರಿ ಶ್ರೀ @BSYBJP ಅವರು, ಕೋವಿಡ್19 ಸೋಂಕಿನಿಂದ ಉಂಟಾಗಿರುವ ಕಠಿಣ ಸಂದರ್ಭದಲ್ಲಿ ಸರ್ಕಾರ ಕಾರ್ಮಿಕರ ಬೆನ್ನಿಗೆ ನಿಂತಿದ್ದು, ಯಾರೂ ಕೂಡ ಆತಂಕಕ್ಕೊಳಗಾಗಬಾರದು ಎಂದು ಮನವಿ ಮಾಡಿದ್ದಾರೆ.

View image on Twitter

289

3:31 PM - May 1, 2020

Twitter Ads info and privacy

50 people are talking about this

ಕ, ಪ್ರ ವರದಿ

Prayer Timings

Fajr فجر
Dhuhr الظهر
Asr أسر
Maghrib مغرب
Isha عشا