Urdu   /   English   /   Nawayathi

ತಂತಮ್ಮ ಊರಿಗೆ ಕಳುಹಿಸುವಂತೆ ದಂಗೆ ಎದ್ದ ಕಾರ್ಮಿಕರು; ರೈಲ್ವೇ ನಿಲ್ದಾಣದಲ್ಲಿ ಕಲ್ಲು ತೂರಾಟ, ಪೊಲೀಸರಿಗೆ ಗಾಯ

share with us

ಬೆಂಗಳೂರು: 06 ಮೇ 2020 (ಫಿಕ್ರೋಖಬರ್ ಸುದ್ದಿ) ತಮ್ಮ ತಮ್ಮ ಊರಿಗೆ ಕಳುಹಿಸುವಂತೆ ಒತ್ತಾಯಿಸಿ ನಗರದಲ್ಲಿರುವ ವಲಸೆ ಕಾರ್ಮಿಕರು ದಿಢೀರ್ ಪ್ರತಿಭಟನೆ ನಡೆಸಿದ್ದು, ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಿದ ಘಟನೆ ಮಂಗಳವಾರ ನಡೆದಿದೆ. ತುಮಕೂರು ರಸ್ತೆಯ ಮಾದಾವರದಲ್ಲಿದ್ದ ನಾಲ್ಕೈದು ಸಾವಿರ ವಲಸೆ ಕಾರ್ಮಿಕರು ತಮ್ಮ ತಮ್ಮ ತವರಿಗೆ ತೆರಳಲು ಸಜ್ಜಾಗಿ ನಿಂತಿದ್ದರು. ಈ ವೇಳೆ ದಿಢೀರನೇ ಪ್ರತಿಭಟನೆಗೆ ಇಳಿದ ಕಾರ್ಮಿಕರು ತಮ್ಮನ್ನು ತಮ್ಮ ಊರಿಗೆ ಕಳುಹಿಸಲು ವ್ಯವಸ್ಥೆ ಮಾಡಬೇಕು ಎಂದು ಆಗ್ರಹಿಸಿ ಪ್ರತಿಭಟನೆಗೆ ಇಳಿದಿದ್ದಾರೆ. ಸ್ಥಳಕ್ಕಾಗಮಿಸಿದ್ದ ಪೊಲೀಸರು ಪರಿಸ್ಥಿತಿ ತಿಳಿಗೊಳಿಸಲು ಯತ್ನಿಸಿದರಾದರೂ ಪೊಲೀಸರ ಮೇಲೆಯೇ ಪ್ರತಿಭಟನಾಕಾರರು ಕಲ್ಲು ತೂರಾಟ ಮಾಡಿದ್ದಾರೆ. ಈ ವೇಳೆ ಕೆಲ ಸಮಯ ಪರಿಸ್ಥಿತಿ ಪ್ರಕ್ಷುಬ್ಧವಾಗಿತ್ತು. ಆದರೆ ಸ್ಥಳಕ್ಕಾಗಮಿಸಿದ ಹಿರಿಯ ಪೊಲೀಸ್ ವರಿಷ್ಠಾಧಿಕಾರಿಗಳು ಕಾರ್ಮಿಕರ ಮನವೊಲಿಸುವಲ್ಲಿ ಯಶಸ್ವಿಯಾಗಿದ್ದಾರೆ. ಅಲ್ಲದೆ ಕಾರ್ಮಿಕರು ಕೆಲಸ ಮಾಡುತ್ತಿದ್ದ ಸ್ಥಳಕ್ಕೆ ವಾಪಸ್ ಹೋಗಲು ನಿರ್ಧರಿಸಿದ್ದಾರೆ. 

ಮೂವರಿಗೆ ಜ್ವರ, ಆಸ್ಪತ್ರೆಗೆ ದಾಖಲು; ಕೊರೋನಾ ಪರೀಕ್ಷೆ
ಇನ್ನು ಪ್ರತಿಭಟನಾ ಸ್ಥಳದಲ್ಲಿದ್ದ ಕಾರ್ಮಿಕರ ಪೈಕಿ ಮೂವರಲ್ಲಿ ನಿನ್ನೆ ಜ್ವರ ಕಾಣಿಸಿಕೊಂಡಿದ್ದು, ಪ್ರಸ್ತುತ ಈ ಮೂವರನ್ನು ಆಸ್ಪತ್ರೆಗೆ ದಾಖಲು ಮಾಡಿ ಪ್ರತ್ಯೇಕವಾಗಿರಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಅಂತೆಯೇ ಮೂವರಿಗೂ ಕೊರೋನಾ ಪರೀಕ್ಷೆ  ಮಾಡಲಾಗಿದ್ದು, ವರದಿಗಾಗಿ ಕಾಯಲಾಗುತ್ತಿದೆ. ಬಾಕಿ ಕಾರ್ಮಿಕರಿಗೆ ಮೈದಾನದಲ್ಲಿ ಶೆಡ್ ವ್ಯವಸ್ಥೆ ಮಾಡಲಾಗಿದ್ದು, ಎಲ್ಲ ಕಾರ್ಮಿಕರಿಗೂ ಊಟದ ವ್ಯವಸ್ಥೆ ಕಲ್ಪಿಸಲಾಗಿದೆ. ಸ್ಥಳೀಯ ಸಂಘಸಂಸ್ಥೆಗಳು ಮತ್ತು ಬಿಬಿಎಂಪಿ ಮೂಲಕ ಕಾರ್ಮಿಕರಿಗೆ ಊಟದ ವ್ಯವಸ್ಥೆ ಮಾಡಲಾಗಿದೆ.

ಕಾರ್ಮಿಕರ ರವಾನೆಗೆ 100 ಬಸ್ ಬಳಕೆ
ವಿವಿಧ ರಾಜ್ಯಗಳ ವಲಸೆ ಕಾರ್ಮಿಕರು ತೆರಳಲು ವಿಶೇಷ ರೈಲು ವ್ಯವಸ್ಥೆಯಾಗಿದೆಯಾದರೂ, ರೈಲು ಅಲಭ್ಯತೆ ಅಥವಾ ವಿಳಂಬದಿಂದ ಕಾರ್ಮಿಕರ ರವಾನೆ ಸಾಧ್ಯವಾಗಿರಲಿಲ್ಲ. ಹೀಗಾಗಿ ಕಾರ್ಮಿಕರಿಗಾಗಿ 100 ವಿಶೇಷ ಬಸ್ ಗಳನ್ನು ನಿಯೋಜಿಸಲಾಗಿದೆ. ಪ್ರಸ್ತುತ ಎಲ್ಲ ಕಾರ್ಮಿಕರಿಗೆ ಬೆಂಗಳೂರು ವಸ್ತು ಪ್ರದರ್ಶನಾಲಯದಲ್ಲಿ ತಾತ್ಕಾಲಿಕ ಆಶ್ರಯ ಕಲ್ಪಿಸಲಾಗಿದೆ. 

ಕ, ಪ್ರ ವರದಿ

Prayer Timings

Fajr فجر
Dhuhr الظهر
Asr أسر
Maghrib مغرب
Isha عشا