Urdu   /   English   /   Nawayathi

ಇನ್ನು ಹೊರ ಜಿಲ್ಲೆಗಳಿಂದ ಬೆಂಗಳೂರಿಗೆ ಬರುವವರಿಗೂ 14 ದಿನಗಳ ಕ್ವಾರಂಟೈನ್ ಕಡ್ಡಾಯ: ಬಿಬಿಎಂಪಿ

share with us

ಬೆಂಗಳೂರು: 10 ಮೇ 2020 (ಫಿಕ್ರೋಖಬರ್ ಸುದ್ದಿ) ಕೊರೋನಾ ಸೋಂಕು ಹರಡುವಿಕೆಯನ್ನು ತಡೆಗಟ್ಟುವ ಸಲುವಾಗಿ ಅನ್ಯ ರಾಜ್ಯಗಳಿಂದ ಬರುವವರ ಜೊತೆಗೆ, ಇತರ ಜಿಲ್ಲೆಗಳಿಂದ ನಗರಕ್ಕೆ ಆಗಮಿಸುವ ಪ್ರತಿಯೊಬ್ಬರಿಗೂ 14 ದಿನಗಳ ಕಾಲ ಕಡ್ಡಾಯ ಕ್ವಾರಂಟೈನ್ ನಿಯಮ ಜಾರಿಗೊಳಿಸಲು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಮುಂದಾಗಿದೆ. ಹೊರ ಜಿಲ್ಲೆಗಳಿಂದ ಪಾಸ್‌ ಪಡೆದು ಬರುವವರು ನಗರವನ್ನು ಪ್ರವೇಶಿಸುತ್ತಿದ್ದಂತೆಯೇ ಅವರ ವಿವರ ಪಡೆದು ಅವರ ಕೈಗಳಿಗೆ ಮುದ್ರೆ ಹಾಕಲಾಗುತ್ತಿದೆ. ಕಡ್ಡಾಯವಾಗಿ 14 ದಿನ ಮನೆಯಲ್ಲೇ ಇರಬೇಕು ಹೊರಗಡೆ ಎಲ್ಲೂ ಅಡ್ಡಾಡಬಾರದು ಎಂದು ಸೂಚನೆ ನೀಡಲಾಗುತ್ತಿದೆ. ಈ ನಿಯಮ ಶುಕ್ರವಾರದಿಂದಲೇ ಜಾರಿಯಲ್ಲಿದೆ ಎಂದು ಬಿಬಿಎಂಪಿ ಅಧಿಕಾರಿಗಳು ತಿಳಿಸಿದ್ದಾರೆ. ಜೊತೆಗೆ, ಹೊರ ರಾಜ್ಯದಿಂದ ಬರುವವರು ನಿಗದಿಪಡಿಸಿರುವ ಹೋಟೆಲ್‌ ಅಥವಾ ವಿದ್ಯಾರ್ಥಿನಿಲಯಗಳನ್ನು ಆಯ್ಕೆ ಮಾಡಿಕೊಂಡು 14 ದಿನ ಕಾಲ ಕ್ವಾರಂಟೈನ್ ಗೆ ಒಳಪಡಬೇಕು. ಆ ಹೋಟೆಲ್‌ಗಳ ವೆಚ್ಚವನ್ನು ಅವರೇ ಪಾವತಿಸಬೇಕಾಗುತ್ತದೆ. ಆರ್ಥಿಕವಾಗಿ ಶಕ್ತರಲ್ಲದವರಿಗೆ ಹಾಸ್ಟೆಲ್‌ಗಳಲ್ಲಿ ಉಳಿದುಕೊಳ್ಳುವುದಕ್ಕೆ ಅವಕಾಶ ಕಲ್ಪಿಸಲಾಗುತ್ತದೆ. ಹಾಸ್ಟೆಲ್‌ಗಳಲ್ಲಿ ಉಚಿತ ಊಟ ಒದಗಿಸಲಾಗುತ್ತದೆ.

ಕ, ಪ್ರ ವರದಿ

Prayer Timings

Fajr فجر
Dhuhr الظهر
Asr أسر
Maghrib مغرب
Isha عشا