Urdu   /   English   /   Nawayathi

49 ಸಿಬ್ಬಂದಿಗಳಿಗೆ ಹರಡಿದ ಕೊರೋನಾ ಸೋಂಕು; ತಮಿಳುನಾಡಿನಲ್ಲಿ ನೋಕಿಯಾ ಫೋನ್‌ ತಯಾರಿಕಾ ಘಟಕ ಸ್ಥಗಿತ

share with us

ಚೆನ್ನೈ: 27 ಮೇ 2020 (ಫಿಕ್ರೋಖಬರ್ ಸುದ್ದಿ) ನೆರೆಯ ತಮಿಳುನಾಡಿನಲ್ಲಿ ಕೊರೋನಾ ವೈರಸ್ ಅಟ್ಟಹಾಸ ಮಿತಿ ಮೀರಿದ್ದು, ನೋಕಿಯಾ ಫೋನ್ ತಯಾರಿಕಾ ಘಟಕದ ಬರೊಬ್ಬರಿ 49 ಮಂದಿ ಸಿಬ್ಬಂದಿಗೆ ಸೋಂಕು ತಗುಲಿರುವುದು ದೃಢಪಟ್ಟಿರುವುದರಿಂದ ಇಡೀ ಘಟಕವನ್ನು ಸ್ಥಗಿತಗೊಳಿಸಲಾಗಿದೆ. ತಮಿಳುನಾಡಿನ ಶ್ರೀಪೆರಂಬದೂರಿನಲ್ಲಿರುವ ತಯಾರಿಕಾ ಘಟಕದಲ್ಲಿನ 42 ಸಿಬ್ಬಂದಿಗಳಲ್ಲಿ ಸೋಂಕು ಕಾಣಿಸಿಕೊಂಡಿದ್ದು, ಇದೇ ಕಾರಣಕ್ಕೆ ಇಡೀ ಘಟಕವನ್ನು ಸ್ಥಗಿತಗೊಳಿಸಲಾಗಿದೆ ಎಂದು ಹೇಳಲಾಗಿದೆ. ಕಳೆದ ವಾರವಷ್ಟೇ ಶ್ರೀಪೆರಂಬದೂರಿನಲ್ಲಿರುವ ತಯಾರಿಕ ಘಟಕವನ್ನು ಸಿಮೀತ  ಸಿಬ್ಬಂದಿ, ಸಾಮಾಜಿಕ ಅಂತರ ಹಾಗೂ ಅಗತ್ಯ ಸುರಕ್ಷತಾ ಕ್ರಮಗಳೊಂದಿಗೆ ಕಾರ್ಯಾರಂಭ ಮಾಡಲಾಗಿತ್ತು. ಆದರೆ ನೌಕರರಲ್ಲಿ ಮತ್ತೆ ಸೋಂಕು ಪತ್ತೆಯಾಗಿರುವುದರಿಂದ ಮತ್ತೆ ಕಾರ್ಯಾಚರಣೆಯನ್ನು ಸ್ಥಗಿತಗೊಳಿಸಲಾಗಿದೆ ಎಂದು ನೋಕಿಯಾ ಕಂಪನಿ ತಿಳಿಸಿದೆ. ಇದೇ ವೇಳೆ ಅಗತ್ಯ ಸುರಕ್ಷತಾ ಕ್ರಮಗಳೊಂದಿಗೆ ಶೀಘ್ರದಲ್ಲೇ ಘಟಕ ಮತ್ತೆ ಕಾರ್ಯಾರಂಭ ಮಾಡಲಿದೆ ಎಂದು ಕಂಪನಿ ತಿಳಿಸಿದೆ. ಪ್ರಸ್ತುತ ಸಂಸ್ಥೆಯಲ್ಲಿ ಎಷ್ಟು ಸಿಬ್ಬಂದಿಗೆ ಸೋಂಕು ವ್ಯಾಪಿಸಿದೆ ಎಂಬುದನ್ನು ಸಂಸ್ಥೆ ತಿಳಿಸಿಲ್ಲ. ಆದರೆ 42 ಸಿಬ್ಬಂದಿಗಳಲ್ಲಿ ಸೋಂಕು ಕಾಣಿಸಿಕೊಂಡಿದೆ ಎಂದು  ಮೂಲಗಳು ತಿಳಿಸಿವೆ. ಇತ್ತೀಚೆಗಷ್ಟೇ ದೆಹಲಿಯಲ್ಲಿ ಕಾರ್ಯಾರಂಭ ಮಾಡಿದ್ದ ಒಪ್ಪೊ ಮೊಬೈಲ್ ತಯಾರಿಕಾ ಕಂಪನಿಯಲ್ಲಿ ಕೂಡ ಕನಿಷ್ಠ 9 ನೌಕರರಲ್ಲಿ ಕೊರೋನಾ ವೈರಸ್ ಪತ್ತೆಯಾಗಿದ್ದರಿಂದ ಆ ಘಟಕ ತನ್ನ ಕಾರ್ಯಾಚರಣೆಯನ್ನು ಸ್ಥಗಿತಗೊಳಿಸಿತ್ತು.

ಕ, ಪ್ರ ವರದಿ

Prayer Timings

Fajr فجر
Dhuhr الظهر
Asr أسر
Maghrib مغرب
Isha عشا