Latest News:
Oman welcomes Morocco, Israel normalization ಅಪಾಯಕ್ಕೆ ಆಹ್ವಾನ: ಮಾಸ್ಕ್ ಇಲ್ಲದೇ ಪೊಲೀಸ್ ಕಾನ್ಸ್ಟೇಬಲ್ ಕರ್ತವ್ಯ ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸಾ ವೆಚ್ಚ ಸರ್ಕಾರವೇ ಭರಿಸಲಿ: ಐವನ್ ಡಿಸೋಜ ಕುಂದಾಪುರ: ಮೂರು ಪರೀಕ್ಷೆಗೆ ಹಾಜರಾಗಿದ್ದ ಎಸೆಸೆಲ್ಸಿ ವಿದ್ಯಾರ್ಥಿನಿಗೆ ಕೊರೋನಾ ಪಾಸಿಟಿವ್! ಕಾಂಗ್ರೆಸ್ನಿಂದ ಬಿಜೆಪಿ ಮುಖಂಡರ ಹೈಜಾಕ್ ಆರೋಪ: ವಿಜಯಪುರದಲ್ಲಿ ಗಲಾಟೆ, ಲಾಠಿ ಚಾರ್ಜ್ ಕಂಟೈನ್ಮೆಂಟ್ ಝೋನ್ನಲ್ಲಿ ಕರ್ತವ್ಯದ ವೇಳೆ ಕುಸಿದು ಬಿದ್ದ ಆಶಾ ಕಾರ್ಯಕರ್ತೆ ಕೆಎಸ್ಆರ್ ಟಿಸಿ ನೇಮಕಾತಿ: ವಂಚಕರಿಂದ ದೂರವಿರಿ - ಶಿವಯೋಗಿ ಕಳಸದ್ ಅಸ್ಸೋಂ ರಣಭೀಕರ ಮಳೆ... ಕಾಜಿರಂಗದಲ್ಲಿ ಪ್ರಾಣಿಗಳು ದಿಕ್ಕಾಪಾಲು

ಬೆಂಗಳೂರು: 30 ಮೇ 2020 (ಫಿಕ್ರೋಖಬರ್ ಸುದ್ದಿ) ಭಾನುವಾರದಂದು ಸಂಪೂರ್ಣ ಲಾಕ್ ಡೌನ್ ಆದೇಶವನ್ನು ರಾಜ್ಯ ಸರ್ಕಾರ ಹಿಂಪಡೆದಿದ್ದು, ಎಂದಿನಂತೆ ಭಾನುವಾರ ಸಹ ಬೆಳಿಗ್ಗೆ 7 ರಿಂದ ರಾತ್ರಿ 7 ಗಂಟೆವರೆಗೆ ಎಲ್ಲಾ ರೀತಿಯ ಚಟುವಟಿಕೆಗಳಿಗೆ ಅನುಮತಿ ನೀಡಲಾಗಿದೆ. ಮೇ 18 ರಂದು ನಾಲ್ಕನೇ ಹಂತದ ಲಾಕ್ ಡೌನ್ ಘೋಷಿಸಿದ ಸಂದರ್ಭದಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಭಾನುವಾರ ಸಂಪೂರ್ಣ ಲಾಕ್ ಡೌನ್ ಘೋಷಿಸಿದ್ದರು. ಅದರಂತೆ ಕಳೆದ ಭಾನುವಾರ ಅಗತ್ಯ ವಸ್ತುಗಳು ಹೊರತುಪಡಿಸಿ ಉಳಿದ ಎಲ್ಲಾ ಚಟುವಟಿಕೆಗಳು ರದ್ದಾಗಿತ್ತು. ಸಾರ್ವಜನಿಕರ ಕೋರಿಕೆ ಮೇರೆಗೆ ಭಾನುವಾರದ ಸಂಪೂರ್ಣ ಲಾಕ್ ಡೌನ್ ಆದೇಶ ಮಾರ್ಪಡಿಸಲಾಗಿದೆ. ಆದರೆ ರಾತ್ರಿ 7 ಗಂಟೆಯಿಂದ ಬೆಳಿಗ್ಗೆ 7 ಗಂಟೆವರೆಗೆ ಯಥಾ ಪ್ರಕಾರ ಕರ್ಫ್ಯೂ ಜಾರಿಯಲ್ಲಿರುತ್ತದೆ ಎಂದು ರಾಜ್ಯದ ಮುಖ್ಯ ಕಾರ್ಯದರ್ಶಿ ಹಾಗೂ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ಕಾರ್ಯಕಾರಿ ಸಮಿತಿ ಅಧ್ಯಕ್ಷ ಟಿ.ಎಂ.ವಿಜಯ್ ಭಾಸ್ಕರ್ ಆದೇಶ ಹೊರಡಿಸಿದ್ದಾರೆ. ರಾತ್ರಿ 7 ಗಂಟೆ ನಂತರ ಅವಶ್ಯಕವಲ್ಲದ ಚಟುವಟಿಕೆಗಳ, ವ್ಯಕ್ತಿಗಳ ಸಂಚಾರವನ್ನು ಕಟ್ಟುನಿಟ್ಟಾಗಿ ನಿಷೇಧಿಸಬೇಕು. ಈ ಸಂಬಂಧ ಸ್ಥಳೀಯ ಪ್ರಾಧಿಕಾರಗಳಿಂದ ಪ್ರತ್ಯೇಕ ಆದೇಶ ಹೊರಡಿಸಬೇಕು. ಸಂಬಂಧಪಟ್ಟ ಜಿಲ್ಲಾಡಳಿಗಳು ಕಟ್ಟುನಿಟ್ಟಾಗಿ ಈ ಆದೇಶ ಜಾರಿಗೆ ತರಬೇಕು ಎಂದು ಸೂಚಿಸಿದೆ. ನಾಳೆ ಕೂಡ ಎಂದಿನಂತೆ ಆಟೋ, ಉಬರ್ ಸೇವೆ ಇರುತ್ತದೆ. ಸಾರ್ವಜನಿಕ ಸಾರಿಗೆ ಸಂಪರ್ಕ ವ್ಯವಸ್ಥೆಯಿರುತ್ತದೆ. ಮದ್ಯದಂಗಡಿ, ಮಾಂಸದಂಗಡಿಗಳು ತೆರೆದಿರುತ್ತವೆ. ಬ್ಯೂಟಿಪಾರ್ಲರ್, ಸೆಲೂನ್ ತೆರೆದಿರುತ್ತದೆ.
Karnataka Varthe✔@KarnatakaVarthe
ಈ ಭಾನುವಾರ ಕಂಪ್ಲೀಟ್ ಲಾಕ್ ಡೌನ್ ಇಲ್ಲ
ಸಾರ್ವಜನಿಕರ ಬೇಡಿಕೆ ಹಿನ್ನೆಲೆಯಲ್ಲಿ, ರಾಜ್ಯದ ಜನತೆಯ ಹಿತದೃಷ್ಟಿಯಿಂದ ನಾಳೆ ದಿನಾಂಕ 31.05.2020 ಭಾನುವಾರದಂದು ಕಂಪ್ಲೀಟ್ ಲಾಕ್ ಡೌನ್ ಇರುವುದಿಲ್ಲ ಎಂದು ಮುಖ್ಯಮಂತ್ರಿ ಶ್ರೀ ಬಿ ಎಸ್ ಯಡಿಯೂರಪ್ಪ ಅವರು ತಿಳಿಸಿದ್ದಾರೆ.1/2
96 people are talking about this
ಕ, ಪ್ರ ವರದಿ
Fajr | فجر | |
Dhuhr | الظهر | |
Asr | أسر | |
Maghrib | مغرب | |
Isha | عشا |