Urdu   /   English   /   Nawayathi

ಸಾರ್ವಜನಿಕ ಸ್ಥಳಗಳಲ್ಲಿ ತಂಬಾಕು ಉತ್ಪನ್ನ ಜಗಿದು ಉಗಿಯುವುದು ನಿಷೇಧ: ಆರೋಗ್ಯ ಇಲಾಖೆ ಆದೇಶ

share with us

ಬೆಂಗಳೂರು: 30 ಮೇ 2020 (ಫಿಕ್ರೋಖಬರ್ ಸುದ್ದಿ) ಕೊರೋನಾ ಸೋಂಕು ಹರಡುವುದನ್ನು ತಡೆಯುವ ಉದ್ದೇಶದಿಂದ ಸಾರ್ವಜನಿಕ ಸ್ಥಳಗಳಲ್ಲಿ ಜಗಿಯುವ ತಂಬಾಕು ಉತ್ಪನ್ನಗಳು ಹಾಗೂ ಪಾನ್‌ ಮಸಾಲ ಉತ್ಪನ್ನಗಳ ಸೇವನೆ ಮತ್ತು ಉಗುಳುವುದನ್ನು ನಿಷೇಧಿಸಿ ರಾಜ್ಯ ಆರೋಗ್ಯ ಇಲಾಖೆ ಶುಕ್ರವಾರ ಆದೇಶ ಹೊರಡಿಸಿದೆ. ಈಗಾಗಲೇ ವಿಶ್ವ ಆರೋಗ್ಯ ಸಂಸ್ಥೆ ಮತ್ತು ಐಸಿಎಂಆರ್‌ ಸಾರ್ವಜನಿಕ ಸ್ಥಳಗಳಲ್ಲಿ ಉಗುಳುವುದರಿಂದ ಕೋವಿಡ್ -19 ಹೆಚ್ಚುತ್ತಿದೆ ಎಂಬ ಕುರಿತು ಆತಂಕ ವ್ಯಕ್ತಪಡಿಸಿದೆ. ಈ ಹಿನ್ನೆಲೆಯಲ್ಲಿ ತಂಬಾಕು ಜಗಿದು ಸಾರ್ವಜನಿಕ ಸ್ಥಳಗಳಲ್ಲಿ ಉಗುಳುವುದನ್ನು ನಿಷೇಧಿಸಲಾಗಿದೆ ಎಂದು ಇಲಾಖೆ ಆದೇಶದಲ್ಲಿ ತಿಳಿಸಿದೆ. ನಿಯಮ ಉಲ್ಲಂಘಿಸಿದಲ್ಲಿ, ಐಪಿಸಿ ಸೆಕ್ಷನ್‌ 188 (ಸಾರ್ವಜನಿಕ ಅಧಿಕಾರಿಯ ಆದೇಶ ಉಲ್ಲಂಘನೆ), 268, 269, 279 (ಜೀವಕ್ಕೆ ಅಪಾಯಕಾರಿಯಾದ ರೋಗವನ್ನು ನಿರ್ಲಕ್ಷ್ಯದಿಂದ ಹರಡುವುದು) ಅಡಿ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಆದೇಶ ಎಚ್ಚರಿಕೆ ನೀಡಿದೆ.

K'taka Health Dept@DHFWKA

ಸಾರ್ವಜನಿಕ ಸ್ಥಳಗಳಲ್ಲಿ ತಂಬಾಕು ಉತ್ಪನ್ನಗಳ ಸೇವನೆ ಮತ್ತು ಉಗುಳುವುದು ನಿಷೇಧಿಸಲಾಗಿದೆ.
Spitting in public is prohibited.@CMofKarnataka @BSYBJP @sriramulubjp @KarnatakaVarthe @PIBBengaluru @BlrCityPolice @blrcitytraffic @NammaBESCOM @BMTC_BENGALURU @publictvnews @suvarnanewstv @tv9kannada

View image on TwitterView image on Twitter

114

12:25 PM - May 30, 2020

Twitter Ads info and privacy

54 people are talking about this

ಈ ಹಿಂದೆ ಎಲ್ಲ ರಾಜ್ಯಗಳಿಗೆ ಪತ್ರ ಬರೆದಿದ್ದ ಕೇಂದ್ರ ಸರ್ಕಾರ, ಸಾರ್ವಜನಿಕ ಸ್ಥಳಗಳಲ್ಲಿ ಜಗಿಯುವ ತಂಬಾಕು ಉತ್ಪನ್ನಗಳ ಸೇವನೆ ಮತ್ತು ಉಗಿಯುವುದನ್ನು ನಿಷೇಧಿಸಲು ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳುವಂತೆ ಸೂಚಿಸಿತ್ತು. ಈಗಾಗಲೇ ಬಿಹಾರ, ಜಾರ್ಖಂಡ್‌ ರಾಜ್ಯಗಳಲ್ಲಿ ಎಲ್ಲ ರೀತಿಯ ಜಗಿಯುವ ತಂಬಾಕು, ಪಾನ್‌ ಮಸಾಲ ಉತ್ಪನ್ನಗಳನ್ನು ನಿಷೇಧಿಸಲಾಗಿದೆ.

ಕ, ಪ್ರ ವರದಿ

Prayer Timings

Fajr فجر
Dhuhr الظهر
Asr أسر
Maghrib مغرب
Isha عشا