Urdu   /   English   /   Nawayathi

ಕಂಟೈನರ್​ಗೆ ಕಾರು ಡಿಕ್ಕಿ : ಚಾಲಕ ಸ್ಥಳದಲ್ಲೇ ಸಾವು

share with us

ಮಂಗಳೂರು: 31 ಮೇ 2020 (ಫಿಕ್ರೋಖಬರ್ ಸುದ್ದಿ) ರಾಷ್ಟ್ರೀಯ ಹೆದ್ದಾರಿ 66ರ ಜಪ್ಪಿನಮೊಗರು ಸಮೀಪ ಇಂದು ಮುಂಜಾನೆ ಕಾರೊಂದು ಕಂಟೈನರ್​ಗೆ ಡಿಕ್ಕಿ ಹೊಡೆದ ಪರಿಣಾಮ ಕಾರು ಚಾಲಕ ಸ್ಥಳದಲ್ಲೇ ಮೃತಪಟ್ಟು, ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಚೇತನ್ (21) ಮೃತ ಚಾಲಕ. ಕಾರಿನಲ್ಲಿದ್ದ ಎಲ್ಲಾ ಯುವಕರು ಕಾವೂರಿನ ಗಾಂಧಿನಗರ ನಿವಾಸಿಗಳಾಗಿದ್ದಾರೆ. ಇವರೆಲ್ಲರೂ ನಗರದ ತೊಕ್ಕೊಟ್ಟುವಿನಲ್ಲಿ ನಿನ್ನೆ ರಾತ್ರಿ ನಡೆದ ಮೆಹಂದಿ ಕಾರ್ಯಕ್ರಮ ಮುಗಿಸಿ 5 ಮಂದಿ ಒಟ್ಟಾಗಿ ಕಾರಿನಲ್ಲಿ ಮಂಗಳೂರಿನತ್ತ ಬರುತ್ತಿದ್ದ ವೇಳೆ ಜಪ್ಪಿನಮೊಗರು ಸಮೀಪ ರಸ್ತೆಯ ಬದಿ ನಿಂತಿದ್ದ ಕಂಟೈನರ್​ಗೆ ಕಾರು ಡಿಕ್ಕಿಯಾಗಿದೆ. ಘಟನೆಯಲ್ಲಿ ಕಾರಿನಲ್ಲಿದ್ದ ಇತರೆ ನಾಲ್ವರು ಗಾಯಗೊಂಡಿದ್ದು, ಸ್ಥಳೀಯರು ಕೂಡಲೇ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಅಪಘಾತದಿಂದ ಕಾರಿನ ಮುಂಭಾಗ ನಜ್ಜುಗುಜ್ಜಾಗಿದೆ. ಈ ಬಗ್ಗೆ ಕಂಕನಾಡು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ, ಇ ವರದಿ

Prayer Timings

Fajr فجر
Dhuhr الظهر
Asr أسر
Maghrib مغرب
Isha عشا