Urdu   /   English   /   Nawayathi

ದೆಹಲಿ ಲೆಫ್ಟಿನೆಂಟ್ ಗವರ್ನರ್ ಕಚೇರಿಯ 13 ಸಿಬ್ಬಂದಿಗೆ ಕೊರೊನಾ ಸೋಂಕು ದೃಢ!

share with us

ನವದೆಹಲಿ: 02 ಜೂನ್  2020 (ಫಿಕ್ರೋಖಬರ್ ಸುದ್ದಿ) ಸಿವಿಲ್ ಲೈನ್ಸ್‌ನ ರಾಜ್ ನಿವಾಸ್ ಮಾರ್ಗದಲ್ಲಿರುವ ದೆಹಲಿ ಲೆಫ್ಟಿನೆಂಟ್ ಗವರ್ನರ್ ಅನಿಲ್ ಬೈಜಾಲ್ ಅವರ ಕಚೇರಿಯಲ್ಲಿ 13 ಸಿಬ್ಬಂದಿಗೆ ಕೋವಿಡ್ -19 ದೃಢಪಟ್ಟಿದೆ ಎಂದು ಲೆಫ್ಟಿನೆಂಟ್ ಗವರ್ನರ್ ಕಚೇರಿ ತಿಳಿಸಿದೆ. ಕಚೇರಿಯಲ್ಲಿ ಕೆಲಸ ಮಾಡುವವರೆಲ್ಲರೂ ಕೋವಿಡ್-19 ಪರೀಕ್ಷೆಗಳಿಗೆ ಒಳಗಾಗಿದ್ದರು. ಮೊದಲ ಪ್ರಕರಣವು ಲೆಫ್ಟಿನೆಂಟ್ ಗವರ್ನರ್ ಕಚೇರಿಯ ವಿಸ್ತೃತ ಶಾಖೆಯಲ್ಲಿ ಕಂಡು ಬಂದಿದ್ದು, ಅಲ್ಲಿ 13 ಜನರಲ್ಲಿ ಕೋವಿಡ್-19 ದೃಢಪಟ್ಟಿದೆ. ಕಳೆದ 24 ಗಂಟೆಗಳಲ್ಲಿ ಭಾರತದಲ್ಲಿ 8,171ಕ್ಕೂ ಹೆಚ್ಚು ಕೋವಿಡ್-19 ಪ್ರಕರಣಗಳು ಮತ್ತು 204 ಸಾವು ಸಂಭವಿಸಿವೆ. ದೇಶದ ಒಟ್ಟು ಸೋಂಕಿತರ ಸಂಖ್ಯೆ 1,98,706ಕ್ಕೆ ತಲುಪಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ತಿಳಿಸಿದೆ.

ಈ, ಇ ವರದಿ

Prayer Timings

Fajr فجر
Dhuhr الظهر
Asr أسر
Maghrib مغرب
Isha عشا