Urdu   /   English   /   Nawayathi

ನಾಳೆ (ಜೂ.7) ರವಿವಾರ ಲಾಕ್ ಡೌನ್ ಇರುವುದಿಲ್ಲ: ಯಥಾಸ್ಥಿತಿ ಮುಂದುವರಿಕೆ

share with us

ಬೆಂಗಳೂರು: 06 ಜೂನ್ 2020 (ಫಿಕ್ರೋಖಬರ್ ಸುದ್ದಿ) ಕೋವಿಡ್-19 ಸೋಂಕು ನಿಯಂತ್ರಣಕ್ಕಾಗಿ ಈ ಹಿಂದೆ ರಾಜ್ಯ ಸರಕಾರ ಆದೇಶಿಸಿದ್ದ ‘ಭಾನುವಾರದ ಲಾಕ್ ಡೌನ್’ ನಾಳೆ ಇರುವುದಿಲ್ಲ. ರಾಜ್ಯದಲ್ಲಿ ಲಾಕ್ ಡೌನ್ ಸಡಿಲಿಸದ ಬಳಿಕ ಕೋವಿಡ್-19 ಸೋಂಕು ನಿಯಂತ್ರಣದ ಮತ್ತೊಂದು ವಿಧಾನವಾಗಿ ಭಾನುವಾರದ ಲಾಕ್ ಡೌನ್ ಗೆ ರಾಜ್ಯ ಸರಕಾರ ಆದೇಶಿಸಿತ್ತು. ನಂತರ ಮೊದಲ ಭಾನುವಾರ ಅಂದರೆ ಮೇ 24ರಂದು ಲಾಕ್ ಡೌನ್ ಮಾಡಲಾಗಿತ್ತು. ರಾಜ್ಯದಲ್ಲಿ ಈ ಲಾಕ್ ಡೌನ್ ಬಹುತೇಕ ಯಶಸ್ವಿಯಾಗಿತ್ತು. ಆದರೆ ಅದರ ನಂತರದ ಭಾನುವಾರ ಅಂದರೆ ( ಮೇ 31) ರಂದು ಈ ಲಾಕ್ ಡೌನ್ ತೆರವುಗೊಳಿಸಲಾಗಿತ್ತು. ಸದ್ಯ ಬಹುತೇಕ ಎಲ್ಲಾ ಲಾಕ್ ಡೌನ್ ನಿರ್ಬಂಧಗಳು ಸಡಿಲವಾಗಿರುವ ಕಾರಣ ಇನ್ನೂ ಈ ಭಾನುವಾರದ ಲಾಕ್ ಡೌನ್ ಮುಂದುವರಿಯುವುದು ಅನುಮಾನ ಎನ್ನಲಾಗಿದೆ. ಆದರೆ ರಾತ್ರಿಯ ವೇಳೆಯ ಕರ್ಫ್ಯೂ ಯಥಾಸ್ಥಿತಿಯಂತೆ ಮುಂದುವರಿಯಲಿದೆ ಎನ್ನಲಾಗಿದೆ. ನಾಳೆ (ಜೂ.7) ರವಿವಾರ ಲಾಕ್ ಡೌನ್ ರದ್ದಾಗಿರುವ ಬಗ್ಗೆ ಅಧಿಕೃತ ಆದೇಶ ಇಂದು ಸಂಜೆಯ ವೇಳೆಗೆ ಮುಖ್ಯಮಂತ್ರಿ ಸಚಿವಾಲಯದಿಂದ ಬರುವ ನಿರೀಕ್ಷೆಯಿದೆ.

ಕಂಟೈನ್ಮೆಂಟ್ ವಲಯಗಳಲ್ಲಿ 30.06.2020 ರವರೆಗೆ ಸಂಪೂರ್ಣ ಲಾಕ್ ಡೌನ್ ಇರುತ್ತದೆ.
ವೈದ್ಯಕೀಯ ತುರ್ತು ಸೇವೆಗಳು ಮತ್ತು ಅವಶ್ಯಕತೆಗಳು ಹಾಗೂ ಅಗತ್ಯ ವಸ್ತುಗಳು ಮತ್ತು ಸೇವೆಗಳ ಪೂರೈಕೆಗಳನ್ನು ಕಾಪಾಡಿ ಕೊಳ್ಳಲು ಅನುಮತಿಯನ್ನು ನೀಡಲಾಗಿದೆ. ಇವುಗಳ ಹೊರತು ಕಂಟೈನ್ಮೆಂಟ್ ವಲಯ ಒಳಗೆ ಹಾಗೂ ಹೊರಗೆ ಜನರ ಚಲನ ವಲನಗಳನ್ನು ನಿಷೇಧಿಸಲಾಗಿದೆ. ಕಂಟೈನ್ಮೆಂಟ್ ವಲಯಗಳ ಹೊರಗಿನ ಪ್ರದೇಶದಲ್ಲಿ ಚಟುವಟಿಕೆಗಳು : ಕಂಟೈನ್ ಮೆಂಟ್ ವಲಯಗಳ ಹೊರಗಿನ ಪ್ರದೇಶದಲ್ಲಿ ಈ ಕೆಳಗಿನ ಚಟುವಟಿಕೆಗಳನ್ನು ಹೊರತು ಪಡಿಸಿ ಎಲ್ಲಾ ಚಟುವಟಿಕೆಗಳನ್ನು ಸರ್ಕಾರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಕಾಲಕಾಲಕ್ಕೆ ಹೊರಡಿಸಿದ , ಸೂಚನೆಗಳು ಮತ್ತು ಕಾರ್ಯಾಚರಣೆಯ ಕಾರ್ಯವಿಧಾನಗಳ ಷರತ್ತುಗಳೊಂದಿಗೆ ನಡೆಸಲು ಅನುಮತಿಸಲಾಗಿದೆ, ಆದರೆ ಸಾರ್ವಜನಿಕರಿಗೆ ಧಾರ್ಮಿಕ ಸ್ಥಳಗಳು ಪೂಜಾ ಸ್ಥಳಗಳು ಹೋಟೆಲ್ ಗಳು ರೆಸ್ಟೋರೆಂಟ್ ಗಳು ಮತ್ತು ಇತರ ಅತಿಥ್ಯ ಸೇವೆಗಳು , ಶಾಪಿಂಗ್ ಮಾಲ್ ಗಳು ಚಟುವಟಿಕೆಗಳನ್ನು ದಿನಾಂಕ:08.06.2020 ರಿಂದ ಪ್ರಾರಂಭಿಸಲು ಅನುಮತಿಸಲಾಗಿದೆ. ಆದರೆ ಈ ಸಂಬಂಧ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಗಳಿಂದ ಹೊರಡಿಸಲಾದ ಮಾರ್ಗಸೂಚಿ (SOP) ಷರತ್ತುಗಳನ್ನು ಪಾಲಿಸತಕ್ಕದ್ದು. ವಿವಾಹದ ಸಂದರ್ಭಗಳಲ್ಲಿ ಸಾಮಾಜಿಕ ಅಂತರವನ್ನು ಖಾತ್ರಿಪಡಿಸಿಕೊಂಡು ಗರಿಷ್ಠ 50 ಅತಿಥಿಗಳನ್ನು ಮಾತ್ರ ಅಹ್ವಾನಿಸತಕ್ಕದ್ದು, ಈ ಬಗ್ಗೆ ಹೊರಡಿಸಲಾದ ಸರ್ಕಾರದ ಎಲ್ಲಾ ನಿಯಮಾವಳಿಗಳನ್ನು ಪಾಲಿಸುವುದು, ಶವ ಸಂಸ್ಕಾರ, ಅಂತಿಮ ಯಾತ್ರೆಯ ಸಮಯದಲ್ಲಿ ಸಾಮಾಜಿಕ ಅಂತರವನ್ನು ಖಾತ್ರಿಪಡಿಸಿ ಕೊಳ್ಳುವುದು ಮತ್ತು ಗರಿಷ್ಠ 20 ಜನರಿಗಿಂತ ಮೇಲೆ ಸೇರದೇ ಇರುವುದನ್ನು ಖಚಿತಪಡಿಸಿಕೊಳ್ಳಿ ತಕ್ಕದ್ದು, ಸಾರ್ವಜನಿಕ ಸ್ಥಳಗಳಲ್ಲಿ ಮತ್ತು ಸಾರಿಗೆಯಲ್ಲಿ ಎಲ್ಲಾ ವ್ಯಕ್ತಿಗಳು ಸಾಮಾಜಿಕ ಅಂತರವನ್ನು ಅನುಸರಿಸುತ್ತದೆ. ಅಂಗಡಿಗಳ ಮಾಲಕರು ಮತ್ತು ಗ್ರಾಹಕರ ನಡುವೆ ಕನಿಷ್ಠ ಆರು (6) ಅಡಿ ದೂರದಲ್ಲಿರುವುದನ್ನು, ಬೆಳಗ್ಗೆ 5.00 ರಿಂದ ಸಂಜೆ 9.00 ರವರೆಗೆ ಸಂಚರಿಸಲು ಅವಕಾಶ ಕಲ್ಪಿಸಲಾಗಿದೆ. ಸಾಮಾಜಿಕ ಅಂತರವನ್ನು ಕಡ್ಡಾಯವಾಗಿ ಕಾಯ್ದುಕೊಳ್ಳ ತಕ್ಕದ್ದು ಹಾಗೂ ಸರ್ಕಾರದ ಮಾರ್ಗಸೂಚಿಯನ್ನು ಕಡ್ಡಾಯವಾಗಿ ಪಾಲಿಸ ತಕ್ಕದ್ದು .

ಕಂಟೈನ್ ಮೆಂಟ್ ವಲಯ ಮತ್ತು ಹೊರ ವಲಯಗಳಲ್ಲಿ ಕೋವಿಡ್ -19 ನಿರ್ವಹಣೆಗೆ ಸಂಬಂಧಿಸಿ, ಸಾರ್ವಜನಿಕರು ಎಲ್ಲಾ ಸಾರ್ವಜನಿಕ ಸ್ಥಳಗಳಲ್ಲಿ ಮುಖಗವಸನ್ನು ಕಡ್ಡಾಯವಾಗಿ ಧರಿಸುವುದು, ಸ್ಥಳೀಯ ಪ್ರಾಧಿಕಾರಗಳು ಅದರ ಕಾನೂನುಗಳು, ನಿಯಮಗಳು ಅಥವಾ ನಿಬಂಧನೆ ಗಳಿಗೆ ಅನುಗುಣವಾಗಿ ಸಾರ್ವಜನಿಕ ಸ್ಥಳಗಳಲ್ಲಿ ಉಗುಳುವುದನ್ನು ನಿರ್ಬಂಧಿಸಿದೆ ಹಾಗೂ ಅದರ ಉಲ್ಲಂಘನೆಗಾಗಿ ನಿಗದಿಪಡಿಸಿದ ದಂಡವನ್ನು ವಿಧಿಸುವುದು, ಸಾರ್ವಜನಿಕ ಸ್ಥಳಗಳಲ್ಲಿ ಮದ್ಯಪಾನ , ಗುಟ್ಕಾ, ತಂಬಾಕು ಇತ್ಯಾದಿಗಳು ಬಳಕೆಗೆ ಅವಕಾಶವಿಲ್ಲ, ಬೃಹತ್ ಸಾರ್ವಜನಿಕ ಸಭೆ ಗಳು ಒಟ್ಟು ಗೂಡುವಿಕೆಗಳನ್ನು ನಿಷೇಧವನ್ನು ಮುಂದುವರಿಸಿದೆ. ಎಲ್ಲಾ ರಾಜಕೀಯ / ಸಾಮಾಜಿಕ /ಕ್ರೀಡಾ/ ಮನೋರಂಜನೆ/ಶೈಕ್ಷಣಿಕ /ಸಾಂಸ್ಕೃತಿಕ ಮತ್ತು ಧಾರ್ಮಿಕ ಮತ್ತು ಇತರ ಜನ ಸೇರುವ ಕಾರ್ಯಕ್ರಮಗಳನ್ನು ನಿರ್ಬಂಧಿಸಿ, ನಾಟಕಗಳು, ಯಕ್ಷಗಾನಗಳನ್ನು ನಡೆಸುವಂತಿಲ್ಲ ಮತ್ತು ರಂಗಮಂದಿರ ಗಳನ್ನು ತೆರೆಯುವಂತಿಲ್ಲ, ಶಾಲೆಗಳು, ಕಾಲೇಜುಗಳು, ವಿಶ್ವವಿದ್ಯಾನಿಲಯಗಳು, ವಾಣಿಜ್ಯ ಶಾಲೆಗಳನ್ನು , ಟ್ಯುಟೋರಿಯಲ್ಸ್ ಮತ್ತು ಕೋಚಿಂಗ್ ಸೆಂಟರ್ ಗಳನ್ನು ಬಂದ್ ಮಾಡಲಾಗಿದ್ದು , ಅವುಗಳನ್ನು ತೆರೆಯದ ತಕ್ಕದ್ದಲ್ಲ. Online / distance learning ಅವಕಾಶ ಕಲ್ಪಿಸಲಾಗಿದೆ. ಸಿನಿಮಾ ಹಾಲ್‌ಗಳು/ ಥಿಯಟರ್ ಜಿಮ್ ಗಳು, ಈಜುಕೊಳಗಳು, ಮನರಂಜನಾ ಪಾರ್ಕ್ ಗಳು ಮತ್ತು ಅಂತಹ ಸ್ಥಳಗಳು ಬಾರ್‌ಗಳು ಮತ್ತು ಸಭಾಂಗಣಗಳು, ಅಸೆಂಬ್ಲಿ ಹಾಲ್ ಗಳನ್ನು ತೆರೆಯತಕ್ಕದ್ದಲ್ಲ. ಪಬ್ ಗಳು, ಕ್ಲಬ್ ಗಳು,ಹಾಗೂ ನೈಟ್ ಕ್ಲಬ್ ಗಳನ್ನು ತೆರೆಯ ತಕ್ಕದ್ದಲ್ಲ. 65 ವರ್ಷ ಜಾಸ್ತಿ ಪ್ರಾಯದ ವ್ಯಕ್ತಿಗಳು ಹಾಗೂ 10 ವರ್ಷಕ್ಕಿಂತ ಕಡಿಮೆ ಪ್ರಾಯದ ಮಕ್ಕಳು ಮತ್ತು ಗರ್ಭಿಣಿಯರು, ಅಸ್ವಸ್ಥರು ತುರ್ತು ವೈದ್ಯಕೀಯ ಕಾರಣ ಹೊರತ್ತು ಪಡಿಸಿ ಮನೆಯಿಂದ ಹೊರಗೆ ಬರಲು ಅವಕಾಶವಿರುವುದಿಲ್ಲ. ಬೀಚ್‌ಗಳಿಗೆ ಸಾರ್ವಜನಿಕರ ಪ್ರವೇಶವನ್ನು ನಿರ್ಬಂಧಿಸಿದೆ.

ಉ, ಟೈ ವರದಿ

Prayer Timings

Fajr فجر
Dhuhr الظهر
Asr أسر
Maghrib مغرب
Isha عشا