Urdu   /   English   /   Nawayathi

ಮಕ್ಕಳ ಕಲ್ಯಾಣ ಸಮಿತಿ ಸದಸ್ಯನಿಂದ ಅಧ್ಯಕ್ಷೆ ಮೇಲೆ ಲೈಂಗಿಕ ಕಿರುಕುಳ ಆರೋಪ: ದೂರು ದಾಖಲು

share with us

ಕಲಬುರಗಿ: 06 ಜೂನ್ 2020 (ಫಿಕ್ರೋಖಬರ್ ಸುದ್ದಿ) ಮಕ್ಕಳ ಕಲ್ಯಾಣ ಸಮಿತಿ ಸದಸ್ಯನೊಬ್ಬ ಸಮಿತಿಯ ಅಧ್ಯಕ್ಷೆಗೆ ಲೈಂಗಿಕ ಕಿರುಕುಳ ನೀಡಿದ್ದಾನೆ ಎನ್ನುವ ಆರೋಪ ಕೇಳಿ ಬಂದಿದ್ದು, ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮಕ್ಕಳ ಕಲ್ಯಾಣ ಜಿಲ್ಲಾ ಸಮಿತಿ ಸದಸ್ಯ ಸೂರ್ಯಕಾಂತ್ ಎಂಬಾತ ಲೈಂಗಿಕ ಕಿರುಕುಳ ನೀಡಿದ್ದಾನೆ ಎಂದು ಆರೋಪಿಸಿ, ಆತನ ವಿರುದ್ದ ಪ್ರಕರಣ ದಾಖಲಿಸಿದ್ದಾರೆ. ಈ ಕುರಿತು ಹಲವು ಬಾರಿ ತಿಳಿ ಹೇಳಿದರೂ ಕಿರುಕುಳ ನೀಡಿದ್ದಾನೆಂದು ಮಹಿಳೆ ತಮ್ಮ ದೂರಿನಲ್ಲಿ ಆರೋಪಿಸಿದ್ದಾರೆ. ಈ ಕುರಿತು ಜಿಲ್ಲಾಧಿಕಾರಿಗಳ ಗಮನಕ್ಕೆ ಸಹ ತಂದಿದ್ದು, ಮಹಿಳೆಯರ ವಿರುದ್ಧದ ಲೈಂಗಿಕ ದೌರ್ಜನ್ಯ ಸಮಿತಿಗೆ ಒಪ್ಪಿಸಿ ವಿಚಾರಣೆಗೆ ಸೂಚಿಸಿದ್ದರು. ನಂತರದಲ್ಲಿ ಈಗ ಮಹಿಳಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ.

ಈ, ಇ ವರದಿ

Prayer Timings

Fajr فجر
Dhuhr الظهر
Asr أسر
Maghrib مغرب
Isha عشا