Urdu   /   English   /   Nawayathi

ಡೆಂಗ್ಯೂ ಜ್ವರ ಬಾಧಿತ ಪ್ರದೇಶಕ್ಕೆ ಜಿಲ್ಲಾ ಆರೋಗ್ಯ ಅಧಿಕಾರಿಗಳ ಭೇಟಿ, ಪರಿಶೀಲನೆ

share with us

ದಕ್ಷಿಣ ಕನ್ನಡ: 07 ಜೂನ್ 2020 (ಫಿಕ್ರೋಖಬರ್ ಸುದ್ದಿ) ಕಡಬ ತಾಲೂಕಿನ ಕೋಡಿಂಬಾಳದಲ್ಲಿ ಡೆಂಗ್ಯೂ ಪ್ರಕರಣ ಪತ್ತೆಯಾದ ಹಿನ್ನೆಲೆ ದಕ್ಷಿಣ ಕನ್ನಡ ಜಿಲ್ಲಾ ಆರೋಗ್ಯಾಧಿಕಾರಿ ಡಾ. ರಾಮಚಂದ್ರ ಬಾಯಾರಿ ಸ್ಥಳಕ್ಕೆ ಭೇಟಿ ನೀಡಿ ಜ್ವರ ಪೀಡಿತರ ಮನೆಗೆ ತೆರಳಿ ಪರಿಶೀಲನೆ ನಡೆಸಿದ್ದಾರೆ. ಕಳೆದ ವರ್ಷ ಇದೇ ಪ್ರದೇಶದಲ್ಲಿ ಮಹಿಳೆಯೊಬ್ಬರು ಡೆಂಗ್ಯೂ ಜ್ವರದಿಂದ ಮೃತಪಟ್ಟಿದ್ದರು. ಇದೀಗ ಮತ್ತೆ ಒಂದೇ ಮನೆಯ ಮೂವರಿಗೆ ಡೆಂಗ್ಯೂ ಕಾಣಿಸಿಕೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಕೋಡಿಂಬಾಳ ಗ್ರಾಮದ ಮುಳಿಯ ನಿವಾಸಿಗಳಾದ ಲೋಹಿತ್, ತೇಜಸ್ವಿನಿ ಹಾಗೂ ಶೃತಿ ಎಂಬುವರಲ್ಲಿ ಡೆಂಗ್ಯೂ ಜ್ವರ ಪತ್ತೆಯಾಗಿತ್ತು. ಈ ಹಿನ್ನೆಲೆಯಲ್ಲಿ ಜಿಲ್ಲಾ ಆರೋಗ್ಯಾಧಿಕಾರಿಗಳ ತಂಡ ಜ್ವರ ಪೀಡಿತರ ಮನೆಗೆ ಭೇಟಿ ನೀಡಿದ್ದಾರೆ. ಇಲ್ಲಿಗೆ ಸಮೀಪದಲ್ಲಿರುವ ಕಡಬ ಗ್ರಾಮ ಪಂಚಾಯಿತಿಯ ಘನ ತ್ಯಾಜ್ಯ ನಿರ್ವಹಣಾ ವ್ಯವಸ್ಥೆಯ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ಆರೋಗ್ಯ ಅಧಿಕಾರಿಗಳು ಇಲ್ಲಿ ಕಸ ವಿಲೇವಾರಿ ಸಮರ್ಪಕವಾಗಿ ನಡೆಯುತ್ತಿಲ್ಲ. ಹಸಿ ಕಸ ಮತ್ತು ಪ್ಲಾಸ್ಟಿಕ್​​ಗಳನ್ನು ಬೇರ್ಪಡಿಸುವ ಕಾರ್ಯವು ಸರಿಯಾಗಿ ನಡೆಯುತ್ತಿಲ್ಲ ಇದನ್ನು ಸರಿಪಡಿಸಬೇಕು ಎಂದು ಹೇಳಿದರು. ಮಾತ್ರವಲ್ಲ, ಅಲ್ಲಲ್ಲಿ ಕಸ ಎಸೆಯುವವರ ವಿರುದ್ಧ ಸೂಕ್ತ ಕ್ರಮ ಜರಗಿಸಬೇಕು, ಡೆಂಗ್ಯೂ ನಿರ್ಮೂಲನೆಗೆ ಆರೋಗ್ಯ ಇಲಾಖೆಯೊಂದಿಗೆ ಕೈಜೋಡಿಸಬೇಕು, ಮನೆಯ ಸುತ್ತಮುತ್ತ ಮಳೆಯ ನೀರು ಅಥವಾ ಇನ್ನಿತರ ಕೊಳಚೆ ನೀರು ಶೇಖರಣೆಯಾಗದಂತೆ ಎಚ್ಚರ ವಹಿಸುವ ನಿಟ್ಟಿನಲ್ಲಿ ಗ್ರಾಮಸ್ಥರಿಗೆ ಕಟ್ಟುನಿಟ್ಟಾಗಿ ಸೂಚನೆ ನೀಡಬೇಕು ಎಂದು ಹೇಳಿದರು.

medical_officer_visit to dengue found placemedical_officer_visit to dengue found place

ಡೆಂಗ್ಯೂ ಜ್ವರ ಬಾಧಿತ ಪ್ರದೇಶದಲ್ಲಿ ಕಸದ ರಾಶಿ

ಈ ಸಂದರ್ಭದಲ್ಲಿ ಜಿಲ್ಲಾ ಮಲೇರಿಯಾ ನಿಯಂತ್ರಣಾಧಿಕಾರಿ ಡಾ. ನವೀನ್ ಕುಲಾಲ್, ಕಡಬ ಸಮುದಾಯ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಸುಚಿತ್ರಾ ರಾವ್, ಕಡಬ ಗ್ರಾಮ ಪಂಚಾಯಿತಿ ಅಧ್ಯಕ್ಷ ಬಾಬು ಮುಗೇರ, ಅಭಿವೃದ್ಧಿ ಅಧಿಕಾರಿ ಚೆನ್ನಪ್ಪ ಗೌಡ ಕಜೆಮೂಲೆ, ಸದಸ್ಯರಾದ ಸೈಮನ್ ಸಿ.ಜೆ ಮತ್ತಿತರರು ಉಪಸ್ಥಿತರಿದ್ದರು.

ಈ, ಇ ವರದಿ

Prayer Timings

Fajr فجر
Dhuhr الظهر
Asr أسر
Maghrib مغرب
Isha عشا