Urdu   /   English   /   Nawayathi

ದೇಶದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 2.86 ಲಕ್ಷಕ್ಕೆ ಏರಿಕೆಯಾದರೂ ಸಮುದಾಯ ಹಂತ ತಲುಪಿಲ್ಲ- ಐಸಿಎಂಆರ್

share with us

ನವದೆಹಲಿ: 11 ಜೂನ್ 2020 (ಫಿಕ್ರೋಖಬರ್ ಸುದ್ದಿ) ದೇಶದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 2.86ಕ್ಕೆ ಲಕ್ಷಕ್ಕೆ ಏರಿಕೆಯಾಗಿದ್ದು, 8 ಸಾವಿರದ 102 ಮಂದಿ ಸಾವನ್ನಪ್ಪಿದ್ದಾರೆ. ಆದರೂ ಸೋಂಕು ಸಮುದಾಯ ಹಂತ ತಲುಪಿಲ್ಲ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಸಮಿತಿ -ಐಸಿಎಂಆರ್ ಪುನರುಚ್ಚರಿಸಿದೆ. ಭಾರತದಂತಹ ದೊಡ್ಡ ದೇಶದಲ್ಲಿ ಸೋಂಕು ಹರಡುವಿಕೆ ಕಡಿಮೆ ಪ್ರಮಾಣದಲ್ಲಿದೆ. ದೇಶದಲ್ಲಿ ಸೋಂಕು ಸಮುದಾಯ ಹಂತ ತಲುಪಿಲ್ಲ, ಸೋಂಕು ಹರಡುವಿಕೆಯನ್ನು ತಡೆಗಟ್ಟುವಲ್ಲಿ ಲಾಕ್ ಡೌನ್ ಯಶಸ್ವಿಯಾಗಿದೆ ಎಂದು ಐಸಿಎಂಆರ್ ಮಹಾನಿರ್ದೇಶಕ ಪ್ರೊಫೆಸರ್ ಡಾ. ಬಲರಾಮ್ ಭಾರ್ಗವ್ ಸುದ್ದಿಗೋಷ್ಠಿಯಲ್ಲಿಂದು ತಿಳಿಸಿದರು. ದೇಶದಲ್ಲಿ ನಡೆಸಲಾಗುತ್ತಿರುವ ಸೆರೋ ಸರ್ವೆ ಪ್ರಕಾರ, ಇನ್ನೂ ಹೆಚ್ಚಿನ ಜನಸಂಖ್ಯೆ ಕೋವಿಡ್-19 ಸೋಂಕಿಗೆ ತುತ್ತಾಗುವ ಸಾಧ್ಯತೆಯಿದೆ. ಹಾಟ್'ಸ್ಪಾಟ್ ನಗರಗಳಲ್ಲಿನ ಅನೇಕ ಕಂಟೈನ್ಮೆಂಟ್ ಪ್ರದೇಶಗಳಲ್ಲಿನ ಜನಸಂಖ್ಯೆಯ ಮೂರನೇ ಒಂದು ಭಾಗದಷ್ಟು ಜನರು ಸೋಂಕಿಗೊಳಗಾಗಲಿದ್ದಾರೆ ಎಂದರು.

ಕ, ಪ್ರ ವರದಿ

Prayer Timings

Fajr فجر
Dhuhr الظهر
Asr أسر
Maghrib مغرب
Isha عشا