Urdu   /   English   /   Nawayathi

ಕೊರೊನಾರ್ಭಟ: ದೇಶದಲ್ಲಿ 4 ಲಕ್ಷ ಗಡಿ ದಾಟಿದ ಕೇಸ್​ಗಳು, 13 ಸಾವಿರಕ್ಕೂ ಅಧಿಕ ಬಲಿ

share with us

ನವದೆಹಲಿ: 21 ಜೂನ್ 2020 (ಫಿಕ್ರೋಖಬರ್ ಸುದ್ದಿ) ಕೋವಿಡ್​ ಅಬ್ಬರಕ್ಕೆ ಭಾರತ ತಲ್ಲಣಗೊಂಡಿದ್ದು, ಸೋಂಕಿತರ ಸಂಖ್ಯೆ 4 ಲಕ್ಷ ಗಡಿ, ಸಾವಿನ ಸಂಖ್ಯೆ 13 ಸಾವಿರ ಗಡಿ ದಾಟಿದೆ. ಕಳೆದ 24 ಗಂಟೆಗಳಲ್ಲಿ ಈವರೆಗೆ ಅತಿ ಹೆಚ್ಚು ಪ್ರಕರಣಗಳು ಎಂಬಂತೆ ಬರೋಬ್ಬರಿ 15,413 ಸೋಂಕಿತರು ಪತ್ತೆಯಾಗಿದ್ದು, 306 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಪ್ರಕರಣಗಳ ಸಂಖ್ಯೆ 4,10,461ಕ್ಕೆ ಹಾಗೂ ಮೃತರ ಸಂಖ್ಯೆ 13,254ಕ್ಕೆ ಏರಿಕೆಯಾಗಿದೆ. ಚೇತರಿಕೆಯ ಪ್ರಮಾಣದಲ್ಲಿ ಗಣನೀಯ ಏರಿಕೆ ಕಂಡುಬರುತ್ತಿದ್ದು, ಒಟ್ಟು ಸೋಂಕಿತರ ಪೈಕಿ 2,27,756 ಮಂದಿ ಗುಣಮುಖರಾಗಿ, ಆಸ್ಪತ್ರೆಯಿಂದ ಡಿಸ್ಚಾರ್ಚ್​ ಆಗಿದ್ದಾರೆ. ಉಳಿದಂತೆ 1,69,451 ಕೇಸ್​​ಗಳು ಸಕ್ರಿಯವಾಗಿವೆ ಎಂದು ಕೇಂದ್ರ ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

ಈ, ಇ ವರದಿ

Prayer Timings

Fajr فجر
Dhuhr الظهر
Asr أسر
Maghrib مغرب
Isha عشا