Urdu   /   English   /   Nawayathi

ಕೋವಿಡ್ ಕುರಿತು ಸುಳ್ಳು ಮಾಹಿತಿ ರವಾನೆ: ಗ್ರಾ.ಪಂ ಉಪಾಧ್ಯಕ್ಷ, ಸದಸ್ಯರ ವಿರುದ್ಧ ಕೇಸು

share with us

ಮೂಡುಬಿದಿರೆ: 27 ಜೂನ್ 2020 (ಫಿಕ್ರೋಖಬರ್ ಸುದ್ದಿ) ವಸತಿ ಶಾಲೆಯೊಂದರಲ್ಲಿ ಕ್ವಾರಂಟೈನ್‌ಗೆ ಒಳಗಾದ ಇಬ್ಬರಿಗೆ ಕೋವಿಡ್ ಸೋಂಕು ದೃಢಪಟ್ಟಿದೆ ಎಂದು ಅಪಪ್ರಚಾರ ನಡೆಸಿರುವ ಮೂಡುಬಿದಿರೆ ತಾಲೂಕಿನ ವಾಲ್ಪಾಡಿ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಮತ್ತು ಸದಸ್ಯರ ವಿರುದ್ಧ ಪ್ರಕರಣ ದಾಖಲಾಗಿದೆ. ವಾಲ್ಪಾಡಿ ಗ್ರಾಮದಲ್ಲಿರುವ ಭುವನ ಜ್ಯೋತಿ ವಸತಿ ಶಾಲೆಯಲ್ಲಿ ಜಿಲ್ಲಾಡಳಿತ ಕ್ವಾರಂಟೈನ್‌ಗೆ ವ್ಯವಸ್ಥೆ ಮಾಡಿತ್ತು. ಈ ನಿಗಾ ಕೇಂದ್ರದಲ್ಲಿ ಓರ್ವ ಮಹಿಳೆ ಸೇರಿದಂತೆ 12 ಮಂದಿ ಕ್ವಾರಂಟೈನ್‌ಗೆ ಒಳಗಾಗಿದ್ದರು. ಇದರಲ್ಲಿ ಓರ್ವರಿಗೆ ಸೋಂಕು ದೃಢಪಟ್ಟಿದ್ದು, ಅವರನ್ನು ಅಲ್ಲಿಂದ ಆಸ್ಪತ್ರೆಗೆ ಸ್ಥಳಾಂತರಿಸಲಾಗಿತ್ತು. ಆದರೆ ಗ್ರಾ.ಪಂ.ಉಪಾಧ್ಯಕ್ಷ ಅರುಣ್ ಕುಮಾರ್ ಶೆಟ್ಟಿ ಮತ್ತು ಇತರೆ ಸದಸ್ಯರು ಈ ಕ್ವಾರಂಟೈನ್ ಕೇಂದ್ರದಲ್ಲಿರುವ ಇಬ್ಬರು ವ್ಯಕ್ತಿಗಳಿಗೆ ಸೋಂಕು ತಗುಲಿದೆ ಎಂದು ಸುಳ್ಳು ಪ್ರಚಾರ ನಡೆಸಿ ಕ್ವಾರಂಟೈನ್ ಕೇಂದ್ರದ ಬಗ್ಗೆ ಇಲ್ಲಸಲ್ಲದ ವಿಚಾರಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದರು. ಜೊತೆಗೆ ಬಹಿರಂಗ ಪ್ರಚಾರ ನಡೆಸುವ ಮೂಲಕ ಗ್ರಾಮಸ್ಥರಿಗೆ ಭೀತಿಯನ್ನು ಉಂಟು ಮಾಡುತ್ತಿದ್ದಾರೆ ಎಂದು ಮೂಡುಬಿದಿರೆ ಪೊಲೀಸ್ ಠಾಣೆಯಲ್ಲಿ ದೂರು ನೀಡಲಾಗಿತ್ತು. ಈ ಕುರಿತು ಪೊಲೀಸರು ದಂಡ ಸಂಹಿತೆಯ ಪ್ರಕಾರ ಜಾಮೀನು ರಹಿತ ಪ್ರಕರಣ ದಾಖಲಿಸಿದ್ದಾರೆ.

ಈ, ಇ ವರದಿ

Prayer Timings

Fajr فجر
Dhuhr الظهر
Asr أسر
Maghrib مغرب
Isha عشا