Urdu   /   English   /   Nawayathi

ಕಂಟೈನ್ಮೆಂಟ್ ಝೋನ್​​ನಲ್ಲಿ ಕರ್ತವ್ಯದ ವೇಳೆ ಕುಸಿದು ಬಿದ್ದ ಆಶಾ ಕಾರ್ಯಕರ್ತೆ

share with us

ಶಿವಮೊಗ್ಗ: 30 ಜೂನ್ 2020 (ಫಿಕ್ರೋಖಬರ್ ಸುದ್ದಿ) ಕಂಟೈನ್ಮೆಂಟ್ ಜೋನ್​​ನಲ್ಲಿ ಕಾರ್ಯನಿರ್ವಹಿಸುತ್ತಿದ್ದ ಆಶಾ ಕಾರ್ಯಕರ್ತೆ ಅಸ್ವಸ್ಥಗೊಂಡು ಕುಸಿದು ಬಿದ್ದ ಘಟನೆ ಜಿಲ್ಲೆಯ ಶಿಕಾರಿಪುರದಲ್ಲಿ ನಡೆದಿದೆ. ಶಿಕಾರಿಪುರ ಪಟ್ಟಣದ ಕುಂಬಾರಕೇರಿಯಲ್ಲಿ ಕೊರೊನಾ ಸೋಂಕಿತರು ಪತ್ತೆಯಾದ ಹಿನ್ನೆಲೆ ಕಂಟೈನ್ಮೆಂಟ್ ವಲಯ ಎಂದು ಘೋಷಿಸಲಾಗಿದೆ. ಇಲ್ಲಿ ಇಂದು ಕರ್ತವ್ಯ ನಿರತರಾಗಿದ್ದ ನೇತ್ರಾವತಿ ಎಂಬ ಆಶಾ ಕಾರ್ಯಕರ್ತೆ ರಸ್ತೆಯಲ್ಲಿಯೇ ಕುಸಿದು ಬಿದ್ದಿದ್ದಾರೆ. ತಕ್ಷಣ ಜೊತೆಗಿದ್ದ ಆಶಾ ಕಾರ್ಯಕರ್ತೆಯರು ಹಾಗೂ ಸ್ಥಳೀಯರ ನೆರವಿ‌ನಿಂದ ಅವರನ್ನು ಶಿಕಾರಿಪುರ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಆಶಾ ಕಾರ್ಯಕರ್ತೆ ಪಿಪಿಇ ಕಿಟ್ ಹಾಕಿಕೊಂಡು ಕೆಲಸ ಮಾಡುವಾಗ ಸುಸ್ತಾಗಿ ಬಿದ್ದಿದ್ದಾರೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ. ಕುಂಬಾರಕೇರಿ ಸ್ಯಾನಿಟೈಸ್​ ಆಗಿಲ್ಲ. ಆರೋಗ್ಯ ಇಲಾಖೆ ಸರಿಯಾಗಿ ಸ್ಪಂದಿಸುತ್ತಿಲ್ಲ ಎಂದು ಬೆಳಗ್ಗೆ ಸ್ಥಳೀಯರು ಪ್ರತಿಭಟನೆ ನಡೆಸಿದ್ದರು.

ಈ, ಇ ವರದಿ

Prayer Timings

Fajr فجر
Dhuhr الظهر
Asr أسر
Maghrib مغرب
Isha عشا