Urdu   /   English   /   Nawayathi

ಕಾಂಗ್ರೆಸ್​ನಿಂದ ಬಿಜೆಪಿ ಮುಖಂಡರ ಹೈಜಾಕ್​ ಆರೋಪ: ವಿಜಯಪುರದಲ್ಲಿ ಗಲಾಟೆ, ಲಾಠಿ ಚಾರ್ಜ್​

share with us

ವಿಜಯಪುರ: 30 ಜೂನ್ 2020 (ಫಿಕ್ರೋಖಬರ್ ಸುದ್ದಿ) ಜಿಲ್ಲಾ ಪಂಚಾಯತ್​ ಅಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆ ವೇಳೆ ಕಾಂಗ್ರೆಸ್ ಮುಖಂಡರು ಬಿಜೆಪಿ ಸದಸ್ಯರನ್ನು ಹೈಜಾಕ್​ ಮಾಡಿದ್ದಾರೆ ಎಂದು ಆರೋಪಿಸಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ಮಾಡಿದ್ದಾರೆ. ಈ ವೇಳೆ ಜನಜಂಗುಳಿ ನಿಯಂತ್ರಿಸಲು ಪೊಲೀಸರು ಲಘು ಲಾಠಿ ಚಾರ್ಜ್​ ಮಾಡಿದ್ದಾರೆ. ಜಿಲ್ಲಾ ಪಂಚಾಯತ್​ನ 42 ಸದಸ್ಯರಲ್ಲಿ ಅಧ್ಯಕ್ಷ ಸ್ಥಾನ ಪಡೆಯಲು 22 ಸ್ಥಾನಗಳ ಅವಶ್ಯಕತೆಯಿದೆ. ಬಿಜೆಪಿ 20, ಕಾಂಗ್ರೆಸ್ 18, ಜೆಡಿಎಸ್ 3 ಹಾಗೂ ಪಕ್ಷೇತರ ಒಬ್ಬ ಸದಸ್ಯನಿದ್ದಾನೆ. ಇಂದು ಅಧ್ಯಕ್ಷ ಸ್ಥಾನದ ಚುನಾವಣೆ ವೇಳೆ ಕಾಂಗ್ರೆಸ್ ಮುಖಂಡರು ಬಿಜೆಪಿಯ ನಾಲ್ವರು ಸದಸ್ಯರನ್ನು ಹೈಜಾಕ್ ಮಾಡಿದ್ದಾರೆ ಎಂದು ಆರೋಪಿಸಿ ಪ್ರತಿಭಟನೆ ನಡೆಯಿತು. ಈ ವೇಳೆ ಅವರನ್ನು ನಿಯಂತ್ರಿಸಲು ಪೊಲೀಸರು ಲಾಠಿಚಾರ್ಜ್​ ಮಾಡಿದ್ದಾರೆ. ಈ ಸಂದರ್ಭದಲ್ಲಿ ದೇವರ ಹಿಪ್ಪರಗಿ ಬಿಜೆಪಿ ಶಾಸಕ ಸೋಮನಗೌಡ ಪಾಟೀಲ ಮಾತನಾಡಿ, ಕಾಂಗ್ರೆಸ್ ಮುಖಂಡರು, ಜಿಲ್ಲಾಡಳಿತದ ವಿರುದ್ಧ ಕಿಡಿಕಾರಿದರು.

ಈ, ಇ ವರದಿ

Prayer Timings

Fajr فجر
Dhuhr الظهر
Asr أسر
Maghrib مغرب
Isha عشا