Urdu   /   English   /   Nawayathi

ಅಪಾಯಕ್ಕೆ ಆಹ್ವಾನ: ಮಾಸ್ಕ್​​ ಇಲ್ಲದೇ ಪೊಲೀಸ್​ ಕಾನ್ಸ್​ಟೇಬಲ್ ಕರ್ತವ್ಯ

share with us

ಕಡಬ: 30 ಜೂನ್ 2020 (ಫಿಕ್ರೋಖಬರ್ ಸುದ್ದಿ) ಕೊರೊನಾ ಅಟ್ಟಹಾಸದ ನಡುವೆ ಪೊಲೀಸ್ ಸಿಬ್ಬಂದಿಯೋರ್ವರು ಮಾಸ್ಕ್ ಧರಿಸದೆ ಕರ್ತವ್ಯ ನಿರ್ವಹಿಸುತ್ತಿರುವ ಘಟನೆ ಕಡಬದಲ್ಲಿ ಕಂಡುಬಂದಿದೆ. ಕಡಬ ಪೇಟೆಯ ಮುಖ್ಯ ರಸ್ತೆಯಲ್ಲಿ ಕಾರು ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿತ್ತು. ವಾಹನ ಚಾಲಕರು ಸಣ್ಣಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ. ಘಟನಾ ಸ್ಥಳದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಜನರು ಜಮಾಯಿಸಿದ್ದರು. ಈ ವೇಳೆ ಅಲ್ಲಿಗೆ ಕಡಬ ಪೊಲೀಸ್ ಠಾಣೆಯ ಪೊಲೀಸ್​ ಕಾನ್ಸ್​ಟೇಬಲ್​ ಮಾಸ್ಕ್ ಧರಿಸದೇ ಬಂದು ಜನರ ನಡುವೆ ನಿಂತಿದ್ದರು. ಕೊರೊನಾ ಹೆಚ್ಚಿನ ಪ್ರಮಾಣದಲ್ಲಿ ಹರಡುತ್ತಿರುವ ಈ ಸಂದರ್ಭದಲ್ಲಿ ಕಡಬ ಪೊಲೀಸ್ ಠಾಣಾಧಿಕಾರಿ ರುಕ್ಮ ನಾಯ್ಕ್ ಎಲ್ಲಾ ರೀತಿಯ ಮುನ್ನೆಚ್ಚರಿಕೆ ವಹಿಸುವ ಮೂಲಕ ಕೊರೊನಾ ಹರಡದಂತೆ ಕಟ್ಟುನಿಟ್ಟಿನ ಕ್ರಮ ತೆಗೆದುಕೊಳ್ಳುತ್ತಿದ್ದಾರೆ. ಆದರೆ ಸಿಬ್ಬಂದಿಯಿಂದಲೇ ಬೇಜವಾಬ್ದಾರಿಯ ವರ್ತನೆ ಬಟಾಬಯಲಾಗಿದೆ. ಈ ಬಗ್ಗೆ ಸಾರ್ವಜನಿಕ ವಲಯದಲ್ಲಿ ಆಕ್ರೋಶ ವ್ಯಕ್ತವಾಗಿದೆ.

ಈ, ಇ ವರದಿ

Prayer Timings

Fajr فجر
Dhuhr الظهر
Asr أسر
Maghrib مغرب
Isha عشا